ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಪಂಚಾಯಿತಿಗೆ ಆಸ್ಪತ್ರೆ: ಕುಮಾರಸ್ವಾಮಿ

Last Updated 10 ಆಗಸ್ಟ್ 2022, 15:59 IST
ಅಕ್ಷರ ಗಾತ್ರ

ಕೊಣನೂರು (ಹಾಸನ): ‘ಮುಂದಿನ ಚುನಾವಣೆ ಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಮನಾಥಪುರ ಹೋಬಳಿಯ ಜಿಟ್ಟೇನಹಳ್ಳಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೀರಾಂಜನೇಯ ಸ್ವಾಮಿ ಹಾಗೂ ಮಾರಮ್ಮ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ಜನರು ಆರ್ಥಿಕವಾಗಿ ಸಬಲ ರಾಗಲು ಅಗತ್ಯ ಯೋಜನೆ ರೂಪಿಸುತ್ತೇನೆ. ಪ್ರತಿ ಕುಟುಂಬದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ’ ಎಂದರು.

‘ರಾಜ್ಯದಲ್ಲಿ ಅತಿವೃಷ್ಟಿಯಿಂದ ಮನೆ, ಸೇತುವೆ, ರಸ್ತೆಗಳು ಕೊಚ್ಚಿ ಹೋಗಿವೆ. ಉಡುಪಿಯಲ್ಲಿ 6 ವರ್ಷದ ಬಾಲಕಿ ಕೊಚ್ಚಿ ಹೋಗಿದ್ದಾಳೆ. ಸರ್ಕಾರ ಪರಿಹಾರೋಪಾಯ ಕೈಗೊಳ್ಳುತ್ತಿಲ್ಲ. ಮಂತ್ರಿಗಳು ಅತಿವೃಷ್ಟಿಯಿಂದ ಹಾನಿ ಯಾದ ಪ್ರದೇಶಗಳಿಗೆ ತೆರಳಿ ಸಮಸ್ಯೆ ಆಲಿಸುತ್ತಿಲ್ಲ. ಇಂಥ ಆಡಳಿತ ನಡೆಸುವ ಸರ್ಕಾರ ಬೇಕಾ’ ಎಂದು ಪ್ರಶ್ನಿಸಿದರು.

‘ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ನಿಂದ ನಾನು ಕಲಿಯಬೇಕಾದದ್ದು ಏನೂ ಇಲ್ಲ. ನನ್ನ ನಡವಳಿಕೆ ಬಗ್ಗೆ ಪ್ರಶ್ನೆ ಮಾಡುವ ಯೋಗ್ಯತೆ ನಿನಗಿಲ್ಲ. ನಿನ್ನ ದುರಹಂಕಾರದ ಮಾತುಗಳಿಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನ ಉತ್ತರಿಸುತ್ತಾರೆ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ಭ್ರಷ್ಟಾಚಾರದ ಪರ್ಸೆಂಟೇಜ್‌ನಲ್ಲಿ ಸರ್ಕಾರ ನಡೆಯುತ್ತಿದೆ. ರೈತರು, ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ’ ಎಂದು ದೂರಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಮಾಜಿ ಸಚಿವ ಎ.ಮಂಜು, ಶಾಸಕ ಎಚ್.ಡಿ. ರೇವಣ್ಣ, ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ತಹಶೀಲ್ದಾರ್ ಕೆ.ಆರ್. ಶ್ರೀನಿವಾಸ್, ಜೆಡಿಎಸ್ ಮುಖಂಡ ಮೋಹನ್ ಮಲ್ಲಪ್ಪ, ಜಿ.ಪಂ ಮಾಜಿ ಸದಸ್ಯ ಎಚ್.ಎಸ್. ಶಂಕರ್, ಹಾರಂಗಿ ಮಹಾ ಮಂಡಲ ಅಧ್ಯಕ್ಷ ಚೌಡೇಗೌಡ, ಕಾಳೇನ ಹಳ್ಳಿ ಗ್ರಾಪಂ ಅಧ್ಯಕ್ಷೆ ಪಾರ್ವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT