‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಷ್ಟೊಂದು ಅವಧಿಯವರೆಗೆ ಚುನಾವಣೆ ಮುಂದೂಡಿರುವುದು ಇದೇ ಮೊದಲು. ಜನಪ್ರತಿನಿಧಿಗಳಿಲ್ಲದಿದ್ದರೆ ಜನರಿಗೆ ತೊಂದರೆಯಾಗುತ್ತದೆ. ಬೇಗನೆ ಚುನಾವಣೆ ನಡೆಸಬೇಕು. ತಡೆಯಾಜ್ಞೆ ತೆರವುಗೊಳಿಸಲು ಏಕೆ ಕ್ರಮ ಕೈಗೊಂಡಿಲ್ಲ? ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳಿಲ್ಲದಿರುವುದ ರಿಂದಲೇ ಐಟಿ, ಬಿಟಿ ಕಂಪನಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.