ಬುಧವಾರ, ಏಪ್ರಿಲ್ 8, 2020
19 °C

ಪಕ್ಷಕ್ಕೆ ಮುಜುಗರ ತರುತ್ತಿರುವ ಜಿಟಿಡಿ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಜೆಡಿಎಸ್‌ ಬಗ್ಗೆ ನಿಷ್ಠೆ ಇದ್ದರೆ ಶಾಸಕ ಜಿ.ಟಿ.ದೇವೇಗೌಡ ಅವರು ಪಕ್ಷದಲ್ಲೇ ಇರಲಿ. ಹೊರ ಹೋಗುವುದಾದರೆ ಹೋಗಲಿ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಭಾನುವಾರ ಇಲ್ಲಿ ಹೇಳಿದರು.

‘ಜಿ.ಟಿ.ದೇವೇಗೌಡ ಅವರ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತರುತ್ತಿದ್ದು, ಹಿರಿಯರು ಎಂಬ ಕಾರಣಕ್ಕೆ ಪಕ್ಷ ಇದುವರೆಗೆ ಸಹಿಸಿಕೊಂಡಿದೆ. ದೇಹ ಇಲ್ಲಿ ಮನಸ್ಸು ಇನ್ನೆಲ್ಲೋ ಬೇಡ. ಗೊಂದಲದ ಹೇಳಿಕೆ ನೀಡುತ್ತ ಕಾರ್ಯಕರ್ತರನ್ನು ಇಕ್ಕಟ್ಟಿಗೆ ಸಿಲುಕಿಸುವುದು ಬೇಡ’ ಎಂದರು.

ಪಕ್ಷ ಸಂಘಟನೆಗೆ ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ ಅವರನ್ನು ಕರೆಸುವ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಇದುವರೆಗೆ ಭೇಟಿ ಮಾಡಿಲ್ಲ ಎಂದು ನುಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು