ಹಾಸನ: ‘ನಮ್ಮ ಪಕ್ಷವು ಅಧಿಕಾರಕ್ಕಾಗಿ ಜಮೀರ್ ಅಹ್ಮದ್ ಖಾನ್ ಅಂತಹ ಕೆಟಗರಿ ಜನಗಳನ್ನು ಸೇರಿಸಿಕೊಳ್ಳಬೇಕಾದ ಅವಶ್ಯಕತೆ ಇಲ್ಲ. ನಮಗೆ ಎಲ್ಲ ಅನುಭವಗಳಾಗಿವೆ. ಯಾವುದೇ ಕಾರಣಕ್ಕೂ ನನ್ನ ಬಳಿ ಆ ವಿಷಯ ಕೇಳಬೇಡಿ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಹೊಸಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮಗೆ ಅದರ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ, ರಾಜಕೀಯದಲ್ಲಿ ಏನೋ ಶಕ್ತಿ ಬರುತ್ತದೆ ಎಂದು ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ’ ಎಂದರು.

‘2028ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎನ್ನುತ್ತಾರೆ. ಮೂರು ವರ್ಷ ನಿರಂತರವಾಗಿ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಚರ್ಚೆ ನಡೆಯಿತು. ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳುತ್ತಿದ್ದರು. ಇನ್ನೊಬ್ಬರು ದೇವರ ಮೊರೆ ಹೋಗುತ್ತಿದ್ದಾರೆ. ಇದೀಗ ಮಾಟಮಂತ್ರದ್ದು ಪ್ರಾರಂಭವಾಗಿದೆ. ಮುಖ್ಯಮಂತ್ರಿ ಮೇಲೆ ಮಾಟ ಮಾಡಿದ್ದಾರೆ ಎಂದು ಆ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಹುಡುಗಾಟದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ದೂರಿದರು.

ನಾನೂ ರಾಮಭಕ್ತನೇ: ಹೊಳೆನರಸೀಪುರ ತಾಲ್ಲೂಕಿನ ದೊಡ್ಡಬೀಕನಹಳ್ಳಿ ಯಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಮಾತನಾಡಿ, ‘ನೀವು ಮಾತ್ರ ಕೇಸರಿ ಶಾಲು ಹಾಕಿದ್ದೀರಿ. ನನಗೆ ಕೊಟ್ಟಿಲ್ಲ. ನಾನು ಕೂಡ ನಿಮ್ಮಂತೆಯೇ ರಾಮಭಕ್ತ’ ಎಂದರು.

‘ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆಯಾಗಲೆಂದು ದೇವಸ್ಥಾನ ಕಟ್ಟುತ್ತಿದ್ದೀರಿ. ನನ್ನದೂ ಅದೇ ಪ್ರಾರ್ಥನೆ. ಒಮ್ಮೆ ನನ್ನ ಕೈಗೆ ಸರ್ಕಾರ ಕೊಟ್ಟರೆ, ಅದನ್ನು ಮಾಡಿ ತೋರಿಸುವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-777754759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.