ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀರ್‌ ಮನೆ ಮೇಲೆ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸುವಷ್ಟು ಶಕ್ತಿಯಿಲ್ಲ: ರೇವಣ್ಣ

Last Updated 6 ಆಗಸ್ಟ್ 2021, 13:37 IST
ಅಕ್ಷರ ಗಾತ್ರ

ಹಾಸನ: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಝೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸುವಷ್ಟು ಶಕ್ತಿ ಇಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆಮಾತನಾಡಿದ ಅವರು, ‘ನಾವು ಪಡುವಲಹಿಪ್ಪೆ ಹತ್ತಿರ ಹೊಲ‌ ಉತ್ಕಂಡು ಇರೋರು.ಹಾಗಾಗಿ ಐ.ಟಿ, ಇ.ಡಿ ಗೊತ್ತಿಲ್ಲ. ದೊಡ್ಡವರು, ಸಾಹುಕಾರರಿಗೆ ಅದು ಗೊತ್ತಿರುತ್ತೆ. ಆದ್ದರಿಂದ ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡಗೆ ಸಚಿವ ಸ್ಥಾನ ತಪ್ಪಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ, ‘ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿಬಿಳಿಕೆರೆ (ಮೈಸೂರು)–ಹಾಸನ–ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿ 373 ಅನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಮಾಡಿದ ಮನವಿಗೆ ಸಮ್ಮತಿಸಿದ್ದಾರೆ. ಯಾರಿಗೂ ಸಚಿವ ಸ್ಥಾನ ತಪ್ಪಿಸಿಲ್ಲ. ನಮ್ಮ ಮಾತು ಕೇಳುವವರು ಯಾರಿದ್ದಾರೆ. ವೈಯಕ್ತಿಕವಾಗಿ ಯಾರನ್ನು ದ್ವೇಷ ಮಾಡಲ್ಲ’ ಎಂದು ತಿಳಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಸಿ.ಎನ್‌.ಬಾಲಕೃಷ್ಣ ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಪ್ರಕಟಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT