ಬೇಲೂರು: ಆರೋಗ್ಯವಂತರು ಮತ್ತು ಯುವಕರು ರಕ್ತದಾನದ ಮಹತ್ವ ಅರಿತು, ರಕ್ತದಾನ ಮಾಡಲು ಮುಂದಾಗಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಶಾಸಕ ಎಚ್.ಕೆ.ಸುರೇಶ್ ಅವರ ಜನ್ಮದಿನದ ಅಂಗವಾಗಿ, ಅಭಿಮಾನಿ ಬಳಗದಿಂದ ಭಾನುವಾರ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತಕ್ಕೆ ಪರ್ಯಾಯವಾಗಿ ಇನ್ನೊಂದು ವಸ್ತುವನ್ನು ಸೃಷ್ಟಿಸಲು ಸಾಧ್ಯವಿಲ್ಲ, ಒಬ್ಬವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜೀವಗಳನ್ನು ಉಳಿಸಬಹುದಾಗಿದೆ. ಈ ಉದ್ದೇಶದಿಂದ ಹಲವಾರು ವರ್ಷಗಳಿಂದ ನನ್ನ ಜನ್ಮದಿನದಂದು ಅಭಿಮಾನಿಗಳು ರಕ್ತದಾನ ಶಿಬಿರವನ್ನು ಆಯೋಜಿಸುತ್ತಿದ್ದಾರೆ. ಅಭಿಮಾನಿಗಳಿಗೆ ನಾನು ಆಭಾರಿಯಾಗಿದ್ದೇನೆ. ಜನತೆ ನನಗೆ ನೀಡಿರುವ ಆಶೀರ್ವಾದದಿಂದ ಅವರ ಸೇವೆ ಮಾಡಲು ಒಂದು ಅವಕಾಶ ಸಿಕ್ಕಿದೆ, ಈ ಅವಕಾಶ ವನ್ನು ಬಳಸಿಕೊಂಡು ಜನಸೇವಕನಾಗಿ ಕೆಲಸ ಮಾಡುತ್ತೇನೆ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಡಗೂರು ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ, ನಗರ ಘಟಕದ ಅಧ್ಯಕ್ಷ ವಿನಯ್, ಮುಖಂಡರಾದ ಪರ್ವತಯ್ಯ, ರಾಯಪುರ ಶಿವಣ್ಣ, ಜಯಣ್ಣಗೌಡ, ಸನ್ಯಾಸಿಹಳ್ಳಿ ನರೇಂದ್ರ, ಪ್ರಸಾದಿಹಳ್ಳಿ ಪ್ರಣೀತ್, ಯಶ್ವಂತ್, ಪ್ರಶಾಂತ್, ನಿಖಿಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.