ಜಿಲ್ಲೆಯಲ್ಲಿ ಈಗಾಗಲೇ 8 ಮೃತರ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು 4 ವರದಿ ಬಂದಿವೆ. ಎಲ್ಲವನ್ನೂ ಕ್ರೋಡೀಕರಿಸಿ ಸಮಗ್ರ ವರದಿ ಸಲ್ಲಿಸಲಾಗುವುದು.
ಡಾ.ಅನಿಲ್ ಡಿಎಚ್‌ಒ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಹಾಸನದಲ್ಲಿ ಶೀಘ್ರ ಸಭೆ ನಡೆಸುತ್ತೇವೆ. ತಜ್ಞರ ಸಮಿತಿ ನೀಡುವ ಸಲಹೆಯಂತೆ ಕ್ರಮ ಕೈಗೊಳ್ಳುತ್ತೇವೆ.
ಕೆ.ಎನ್. ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವ
ಮೃತಪಟ್ಟವರ ಬಗ್ಗೆ ನಿಖರ ಕಾರಣ ಗೊತ್ತಿಲ್ಲ. ಈ ನಿಟ್ಟಿನಲ್ಲಿ ಒಂದು ತಂಡ ರಚಿಸಿದ್ದು ಪ್ರತಿ ಪ್ರಕರಣ ತನಿಖೆ ಮಾಡಿ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ.
ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ
ಆಸ್ಪತ್ರೆ ಕಾಮಗಾರಿ ಶೀಘ್ರ
‘ಹೃದ್ರೋಗ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಮೊದಲು ಪೂರ್ಣಗೊಳ್ಳಲಿ. ನಾನು ಕೂಡ ಗುತ್ತಿಗೆದಾರನ ಜೊತೆ ಮಾತನಾಡುತ್ತೇನೆ. ಕಟ್ಟಡ ಪೂರ್ಣಗೊಂಡ ನಂತರ ಅಗತ್ಯವಿರುವ ಸಲಕರಣೆ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಹೃದ್ರೋಗ ತಜ್ಞರು ಅಗತ್ಯವಾಗಿದೆ. ಇನ್ನೂ ಇಬ್ಬರು ಮೂವರು ಹೃದ್ರೋಗ ತಜ್ಞರ ನೇಮಕಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.