ಹಾಸನ: ತಾಲ್ಲೂಕಿನ ಕೆಲವತ್ತಿ ಗ್ರಾಮದಲ್ಲಿ ಪದವಿ ವಿದ್ಯಾರ್ಥಿನಿ ಕೆ.ವಿ. ಕವನಾ (21) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗ್ರಾಮದ ಪಾಪಣ್ಣ ಮತ್ತು ಗಾಯತ್ರಿ ದಂಪತಿ ಪುತ್ರಿ ಕವನಾ, ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದು, ಅಂತಿಮ ವರ್ಷದ ಪರೀಕ್ಷೆ ಬರೆಯುತ್ತಿದ್ದರು.

ಮೂರು ಪರೀಕ್ಷೆ ಮುಗಿದಿದ್ದು, ಶುಕ್ರವಾರ ನಾಲ್ಕನೇ ಪರೀಕ್ಷೆ ಇತ್ತು. ಬುಧವಾರ ಸಂಜೆ ಮನೆಗೆ ನೀರು ತರುತ್ತಿದ್ದಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾರೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಕವನಾ ಅವರನ್ನು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಜಿಲ್ಲೆಯಲ್ಲಿ ತಿಂಗಳಲ್ಲಿ ಹೃದಯಾಘಾತದಿಂದ ಇಬ್ಬರು ಯುವತಿಯರು, ಒಬ್ಬ ಯುವಕ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.