ಮಂಗಳವಾರ, ಅಕ್ಟೋಬರ್ 26, 2021
20 °C
ಅರಸೀಕೆರೆಯಲ್ಲಿ ನಾಲ್ಕು ತಾಸು ಮಳೆ, ಮನೆಗಳಿಗೆ ನುಗ್ಗಿದ ನೀರು

ಧಾರಾಕಾರ ಮಳೆ: ಮನೆ ಗೋಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯ ವಿವಿಧೆಡೆ ಮಂಗಳವಾರ ಧಾರಾಕಾರ ಮಳೆಯಾಗಿದೆ. ಅರಸೀಕೆರೆ, ಹಿರೀಸಾವೆ, ನುಗ್ಗೇಹಳ್ಳಿಯಲ್ಲಿ ಜೋರು ಮಳೆ ಸುರಿದರೆ, ಹೆತ್ತೂರು, ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಜಿಟಿಜಿಟಿಯಾಗಿದೆ.

ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯ ಕಾಳೇನಹಳ್ಳಿಯ ತೋಟಗಳಿಗೆ ನೀರು ನುಗ್ಗಿ ವೀಳ್ಯೆದೆಲೆ ಬಳ್ಳಿ, ಬಾಳೆಯ ಗಿಡಗಳಿಗೆ ಹಾನಿಯಾಗಿದೆ.

ಅರಸೀಕೆರೆ ವರದಿ: ನಗರ ಮತ್ತು ತಾಲ್ಲೂಕಿನ ವಿವಿಧೆಡೆ ಮಧ್ಯಾಹ್ನ 2 ಗಂಟೆಗೆ ಶುರುವಾದ ಮಳೆ ನಾಲ್ಕು ತಾಸು ಪರಿಣಾಮ  ವಿವಿಧೆಡೆ ಮನೆಗಳ ಗೋಡೆ ಕುಸಿದಿದಿ. ಮುರುಂಡಿ ಬಿ ತಾಂಡ್ಯದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಗಲೀಜು ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.

ಮುರುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ. ತಾಂಡ್ಯ ಗ್ರಾಮದಲ್ಲಿ ಮಳೆಗೆ ಮನೆಗಳ ಗೋಡೆಗಳು ಕುಸಿದು ಬಿದ್ದಿವೆ.  ಸಂಜೆಯಾದರೂ ಸುರಿಯುತ್ತಿರುವ ಮಳೆಯಿಂದಾಗಿ ವಿಜಯದಶಮಿ ಹಬ್ಬದ ವ್ಯಾಪಾರ ವಹಿವಾಟಿಗೆ ತೊಂದರೆ ಉಂಟಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.