ಶುಕ್ರವಾರ, ಅಕ್ಟೋಬರ್ 30, 2020
23 °C

ಹಾನ ಜಿಲ್ಲೆಯಲ್ಲಿ ವರುಣನ ಆರ್ಭಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯ ವಿವಿಧೆಡೆ ಭಾನುವಾರ ಧಾರಾಕಾರ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸಕಲೇಶಪುರ, ಹೆತ್ತೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಬಿರುಸಿನ ಗಾಳಿ, ಮಳೆಯಾದರೆ,
ಹೊಳೆನರಸೀಪುರ, ಚನ್ನರಾಯಪಟ್ಟಣ, ನುಗ್ಗೇಹಳ್ಳಿಯಲ್ಲಿ ಜಿಟಿಜಿಟಿ ಮಳೆಯಾಗಿದೆ.

ಹಾಸನ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಜೋರು ಮಳೆಯಿಂದಾಗಿ ಚರಂಡಿ ಮತ್ತು ತಗ್ಗು ಪ್ರದೇಶಗಳಲ್ಲಿ
ನೀರು ತುಂಬಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಆಗಿದೆ.

ಜಲಾನಯನ ಪ್ರದೇಶಗಳಾದ ಸಕಲೇಶಪುರ ಮತ್ತು ಮೂಡಿಗೆರೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯಕ್ಕೆ 3888 ಕ್ಯುಸೆಕ್‌ ನೀರು ಹರಿದು ಬರುತ್ತಿದೆ.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೆ.21ರಂದು ರೆಡ್‌ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು