ಹಾಸನ: ಜಿಲ್ಲೆಯ ವಿವಿಧೆಡೆ ವರುಣನ ಅಬ್ಬರ ಜೋರಾಗಿದ್ದು, ಅರಕಲಗೂಡು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದೆ. ಹಾಸನ ನಗರದಲ್ಲೂ ಒಂದು ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಮಳೆಯಾಗಿದೆ.

ಅರಕಲಗೂಡು ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯ ಕಾರಣ ಬಿಸಿಲ ಬೇಗೆಗೆ ಬೆಂದ ಇಳೆಗೆ ತಂಪೆರೆದಿದೆ. ಸಂಜೆ ಬಳಿಕ ಬಿರುಸಿನ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಯಿತು.

ಹಾಸನ ನಗರದಲ್ಲಿ ಗಾಳಿ ಸಹಿತ ಮಳೆ ಸುರಿದ ಕಾರಣ ಕೆಲವೆಡೆ ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದ ಹಿನ್ನೆಲೆಯಲ್ಲಿ ಕೆಲ ಬಡಾವಣೆಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ ಉಂಟಾಯಿತು.

ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕಾಫಿ ಬೆಳೆಗಾರರಿಗೆ ಸಂತಸ ತಂದಿದೆ. ಕೆಲ ತಾಲ್ಲೂಕಿನಲ್ಲಿ ಮೋಡ ಕವಿದ ವಾತಾವರಣ ತಂಪಿನ ಅನುಭವವಾಗಿದೆ. ವಾರದಿಂದ ಜಿಲ್ಲೆಯ ಹಲವು ತಾಲ್ಲೂಕಿನಲ್ಲಿ ಉತ್ತಮ ಮಳೆಯ ಕಾರಣ ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.