ಶುಕ್ರವಾರ, ಜನವರಿ 28, 2022
25 °C

ಹಾಸನ: ಧಾರಾಕಾರ ಮಳೆ: ಮನೆ ಗೋಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ಸಂಜೆ ಧಾರಾಕಾರ ಮಳೆ ಸುರಿದ ಆರ್ಭಟಿಸಿತು. ಸಂಜೆ ಆರು ಗಂಟೆಗೆ ಶುರುವಾದ ಮಳೆ ಸುಮಾರು ಒಂದು ತಾಸಿಗೂ ಅಧಿಕ ಸುರಿಯಿತು. ಎಡೆಬಿಡದೆ ಬೀಳುತ್ತಿರುವ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ.

ಮಳೆಯಿಂದಾಗಿ ಹಲವು ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾನಿಯಾಗಿದ್ದರೆ, ಕೆಲವು ಕಡೆ ಮನೆಗಳ
ಗೋಡೆಗಳು ಕುಸಿದು ಬಿದ್ದಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಸದ್ಯ ಜೋಳ ಕಟಾವು ನಡೆಯುತ್ತಿದ್ದು, ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು