ಹೆತ್ತೂರು: ‘ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಸಮಾಜ ಉತ್ತಮ ಸ್ಥಿತಿಯಲ್ಲಿ ಸಾಗಬೇಕೆಂದರೆ ಪ್ರತಿಯೊಬ್ಬ ಮಗುವೂ ಉತ್ತಮ ಶಿಕ್ಷಣ ಪಡೆದು ಪ್ರಜ್ಞಾವಂತರಾಗಬೇಕು’ ಎಂದು ಆದಿಚುಂಚನಗಿರಿ ಹಾಸನ, ಕೊಡಗು ಶಾಖಾ ಮಠದ ಪೀಠಾಧಿಕಾರಿ ಶಂಭುನಾಥ ಸ್ವಾಮೀಜಿ ಹೇಳಿದರು.

ಹೆತ್ತೂರು ಗ್ರಾಮದಲ್ಲಿ ಗುರುವಾರ ಹೆತ್ತೂರು ಹೋಬಳಿ ಒಕ್ಕಲಿಗರ ಸಮುದಾಯ ಭವನದ ನೂತನ ಭೋಜನ ಕೊಠಡಿ, ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮಠ ಶಿಕ್ಷಣಕ್ಕೆ ಒತ್ತು ನೀಡಿದೆ: ‘ಆದಿಚುಂಚನಗಿರಿ ಮಠವು ಶಿಕ್ಷಣಕ್ಕಾಗಿ ರಾಜ್ಯದ ಎಲ್ಲೆಡೆ ಹಲವು ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಸೌಲಭ್ಯಗಳನ್ನೂ ನೀಡುತ್ತಿದೆ. ಹಲವು ದಾನಿಗಳು ಸಹ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳ ಏಳಿಗೆಗೆ ನೆರವು ನೀಡುತ್ತಿದ್ದಾರೆ. ಸಮುದಾಯದಿಂದ ಸಿಗುವ ಸವಲತ್ತು ಸಮರ್ಪಕವಾಗಿ ಬಳಸಿಕೊಂಡು ಜೀವನ ಮಟ್ಟ ಉತ್ತಮವಾಗಿಸಿಕೊಳ್ಳಿ. ಸಮುದಾಯದ ಸಂಪನ್ಮೂಲ ಸರಿಯಾಗಿ ಬಳಸಿಕೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದಲ್ಲದೆ, ಸಮುದಾಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.

ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಮಾತನಾಡಿ, ‘ಒಕ್ಕಲಿಗ ಸಮುದಾಯ ಕೃಷಿಕ ಸಮುದಾಯವಾಗಿದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಒಕ್ಕಲಿಗರು ಮಹತ್ವದ ಕೊಡುಗೆ ನೀಡಿದ್ದಾರೆ. ಒಕ್ಕಲಿಗರು ತಮ್ಮದೇ ಆದ ವಿಶಿಷ್ಟ ಆತಿಥ್ಯ, ಹಬ್ಬ- ಹರಿದಿನಗಳ ಆಚರಣೆ ಮತ್ತು ಸಾಂಪ್ರದಾಯಿಕ ಶೈಲಿಯ ಆಹಾರ ಪದ್ಧತಿಗೆ ಹೆಸರುವಾಸಿಯಾಗಿದ್ದಾರೆ. ಹೋಬಳಿ ಕೇಂದ್ರದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ವಿಷಯ. ಯುವಕರು ಸಾಮರಸ್ಯದಿಂದ ಸಮಾಜದ ಏಳಿಗೆಗೆ ಮತ್ತಷ್ಟು ಕೆಲಸ ಮಾಡಬೇಕು’ ಎಂದರು.

ನೂತನ ಪದಾಧಿಕಾರಿಗಳ ಆಯ್ಕೆ: ಸಂಘದ ನೂತನ ಅಧ್ಯಕ್ಷರಾಗಿ ಎಚ್.ಜಿ.ಮಹೇಶ್, ಉಪಾಧ್ಯಕ್ಷರಾಗಿ ಬಿಳುತಾಳು ಕಿರಣ್, ಖಜಾಂಚಿಯಾಗಿ ಎಚ್.ಪಿ. ಸತೀಶ್, ಕಾರ್ಯದರ್ಶಿಯಾಗಿ ಕೃಷ್ಣ ಅವಿರೋಧವಾಗಿ ಆಯ್ಕೆಯಾದರು.

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್, ಎಚ್.ಕೆ.ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ನಿರ್ದೇಶಕಿ ಬಿ.ಜಿ.ಇಂದಿರಾ ನಾಗೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತ ಪವನ್, ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮುದ್ದೇಗೌಡ ಜಿ.ಎಲ್., ನಿವೃತ್ತ ಉಪತಹಶೀಲ್ದಾರ್ ಗಂಗಾಧರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಉಜ್ಮಾ ರಿಜ್ವಿ ಸುದರ್ಶನ್, ಹೋಬಳಿ ಒಕ್ಕಲಿಗರ ಸಂಘದ ಅಧ್ಯಕ್ಷ ರಾಧಾಕೃಷ್ಣ, ಕಾರ್ಯದರ್ಶಿ ಕುಶಾಲಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-36-812532820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.