ಶನಿವಾರ, ಸೆಪ್ಟೆಂಬರ್ 26, 2020
27 °C
ಬೆಂಗಳೂರಿನ ಗಲಭೆ, ಗೋಲಿಬಾರ್‌ ಪ್ರಕರಣ

ಬೆಂಗಳೂರು ಗಲಭೆ: ಹೈಕೋರ್ಟ್‌ ನ್ಯಾಯಮೂರ್ತಿ ತನಿಖೆ ನಡೆಸಲಿ- ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಮತ್ತು ಗೋಲಿಬಾರ್‌ ಪ್ರಕರಣವನ್ನು ಹೈಕೋರ್ಟ್‌ ಹಾಲಿ
ನ್ಯಾಯಮೂರ್ತಿ ಅವರಿಂದ ತನಿಖೆ ನಡೆಸಬೇಕು. ಇದಕ್ಕೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಸಹಕರಿಸಬೇಕು ಎಂದು
ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು.

ಗಲಭೆಯಲ್ಲಿ ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದೆ. ಇಷ್ಟು ದೊಡ್ಡ ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆಗೆ ವಹಿಸಿರುವುದು ಸರಿಯಲ್ಲ. ರಾಜಕೀಯ ನಾಯಕರು ಪರಸ್ಪರ ಕೆಸರೆರಚಾಟ ನಿಲ್ಲಿಸಬೇಕು. ಕೇವಲ ಮುಸ್ಲಿಂ ಸಮುದಾಯವನ್ನು ಗುರಿ ಮಾಡಬಾರದು. ಹಿಂದೂ, ಮುಸ್ಲಿಂ, ಆರ್‌ಎಸ್‌ಎಸ್‌, ಎಸ್‌ಡಿಪಿಐ ಸೇರಿದಂತೆ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಿ. ಆದರೆ ನಿರಾಪರಾಧಿಗಳಿಗೆ ಶಿಕ್ಷೆಯಾಗಬಾರದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂರನ್ನು ಐದನೇ ದರ್ಜೆ ಪ್ರಜೆಗಳಂತೆ ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ರಾಜ್ಯಕ್ಕೆ ನೆರವು ನೀಡುವ ವಿಚಾರದಲ್ಲೂ ಕೇಂದ್ರ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು