ಗುರುವಾರ , ಸೆಪ್ಟೆಂಬರ್ 19, 2019
24 °C

ಹಾಸನ ಜಿಲ್ಲೆಯಲ್ಲೂ ಕಟ್ಟೆಚ್ಚರ

Published:
Updated:
Prajavani

ಹಾಸನ: ದೇಶದಲ್ಲಿ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಉಪಗ್ರಹ ನಿಯಂತ್ರಣ ಕೇಂದ್ರ (ಎಂಸಿಎಫ್), ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪೊಲೀಸರ ಹೈ ಅಲರ್ಟ್ ಮಾಡಲಾಗಿದೆ.

ಹಾಸನ ಹೊರ ವಲಯದ ಎಂ.ಸಿ.ಎಫ್ ನಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮೀಣ ಠಾಣೆ ಪೊಲೀಸರು ಹಾಗೂ ಸೇನಾ ತುಕಡಿ ನಿಯೋಜನೆ ಮಾಡಲಾಗಿದೆ.

ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಎಲ್ಲೆಡೆ ಪರಿಶೀಲನೆ ನಡೆಸಿದರು. ಜಿಲ್ಲೆಯ ಹಲವು ಕಡೆ ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ಹದ್ದಿನ‌ ಕಣ್ಣು ಇಡಲಾಗಿದೆ.

Post Comments (+)