ಹಾಸನ: ‘ನಗರದ ಗಂಧದ ಕೋಠಿ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೆಚ್ಚುವರಿ ₹50 ಕೋಟಿ ಅಗತ್ಯವಿದೆ’ ಎಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್) ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಿಳಿಸಿದರು.

‘₹100 ಕೋಟಿ ವೆಚ್ಚದಲ್ಲಿ ಹತ್ತು ವಿಭಾಗಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ₹50 ಕೋಟಿ ಬಿಡುಗಡೆಯಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಅದರಲ್ಲಿ ನರರೋಗ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ, ಹೃದ್ರೋಗ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಒಟ್ಟು ನಾಲ್ಕು ವಿಭಾಗಗಳನ್ನು ಆರಂಭಿಸಬಹುದು. ನಾಲ್ಕು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್ಗಳನ್ನು ಆರಂಭಿಸಬಹುದು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಈಗ ಎಂಬಿಬಿಎಸ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದು, 18 ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ ಪ್ರತಿ ವರ್ಷ 54 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ರೇಡಿಯಾಲಜಿ
ಮತ್ತು ಶ್ವಾಸಕೋಶ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್ಗಳು ಆರಂಭ ವಾಗಬೇಕಿದ್ದು, ಅನುಮತಿ ಪಡೆಯುವ ಪ್ರಕ್ರಿಯೆ ನಡೆದಿದೆ’ ಎಂದು ಅವರು ತಿಳಿಸಿದರು.

‘ವೈದ್ಯಕೀಯ ಕಾಲೇಜು ಮುಂಭಾಗ ನಿರ್ಮಾಣವಾಗುತ್ತಿರುವ 450 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಕಟ್ಟಡ ನಿರ್ಮಾಣ ಎರಡು ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಕೋವಿಡ್ ಕಾರಣ ಇನ್ನೂ ಆರು ತಿಂಗಳ ಬೇಕು ಎಂದು ಗುತ್ತಿಗೆದಾರರು ತಿಳಿಸಿದ್ದಾರೆ’ ಎಂದರು.

‘ವರದಿ ಬಂದ ಬಳಿಕ ಕ್ರಮ’

‘ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಿಮ್ಸ್ ಪ್ರಾಧ್ಯಾಪಕ ಡಾ.ಎಚ್.ಸಿ.ಲೋಕೇಶ್ ಅವರನ್ನು ಅಮಾನತು ಮಾಡಲಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲಾಖಾ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಬಳಿಕ ಕಾಲೇಜಿನ ಆಡಳಿತ ಮಂಡಳಿಯಲ್ಲಿ ಮಂಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಡಾ.ಬಿ.ಸಿ.ರವಿಕುಮಾರ್ ಸ್ಪಷ್ಟಪಡಿಸಿದರು.

ಹಿಮ್ಸ್ ಆವರಣದಲ್ಲೇ ಕ್ಯಾನ್ಸರ್ ರೋಗಕ್ಕೆ ಪೂರ್ಣ ಚಿಕಿತ್ಸೆ ನೀಡಲು ₹18.50 ಕೋಟಿ ಮಂಜೂರಾಗಿದ್ದು, ಟೆಂಡರ್ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ಸಿಗಬೇಕು.

–ಡಾ.ಬಿ.ಸಿ.ರವಿಕುಮಾರ್, ಹಿಮ್ಸ್ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.