ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್ ರಾಜೀನಾಮೆ

Published 26 ಜುಲೈ 2023, 13:45 IST
Last Updated 26 ಜುಲೈ 2023, 13:45 IST
ಅಕ್ಷರ ಗಾತ್ರ

ಹಾಸನ: ನಗರದ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್) ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

8 ವರ್ಷಗಳಿಂದ ಹಿಮ್ಸ್ ನಿರ್ದೇಶಕ ಹಾಗೂ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ರವಿಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಈ ಹುದ್ದೆಗೆ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.

‘ನಾನು ನಿರ್ದೇಶಕನಾಗಿದ್ದ ಅವಧಿಯಲ್ಲಿ ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ. ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸಾ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ್ದೇನೆ’ ಎಂದು ಹೇಳಿದ್ದಾರೆ.

‘ಸರ್ಕಾರ ಹಾಗೂ ಸಂಸ್ಥೆಯ ಎಲ್ಲರ ಸಹಕಾರದಿಂದ ನಾನು ನಿಗದಿಪಡಿಸಿದ್ದ ಎಲ್ಲ ಗುರಿಗಳು ಈಗ ಈಡೇರಿದಂತಾಗಿದ್ದು, ಸಂಸ್ಥೆಗೆ ಎರಡು ಬಾರಿ ಕಾಯಕಲ್ಪ ಪ್ರಥಮ ಪ್ರಶಸ್ತಿ, 2 ಬಾರಿ ಬೆಸ್ಟ್ ಎನ್ಎಸ್ಎಸ್ ಪ್ರಶಸ್ತಿ, ರಾಷ್ಟ್ರೀಯ ಮಾನ್ಯತೆಗಳಾದ ಎನ್‌ಎಬಿಎಚ್‌, ಎನ್‌ಎಬಿಎಲ್‌, ಎನ್‌ಎಕ್ಯುಎಸ್‌, ಲಕ್ಷ್ಯ, ಮುಸ್ಕಾನ್‌ ಮುಂತಾದ ಮಾನ್ಯತೆ ಗಳಿಸಲು ಸಫಲವಾಗಿದ್ದು, ಸಂಸ್ಥೆಯು ಪ್ರಸ್ತುತ ರಾಜ್ಯದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗುರಿ ಸಾಧಿಸಿದ ಹೆಮ್ಮೆ ಹಾಗೂ ಸಂಪೂರ್ಣ ತೃಪ್ತಿಯೊಂದಿಗೆ ನಿರ್ದೇಶಕರ ಹುದ್ದೆಗೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಿ ಆದಷ್ಟು ಶೀಘ್ರ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT