ಪ್ರಜಾವಾಣಿ ವಾರ್ತೆ

ಹಿರೀಸಾವೆ: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಭಾನುವಾರ (ಮಾರ್ಚ್ 9) ನಡೆಯಲಿದೆ ಎಂದು ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎನ್. ಹರೀಶ್ ತಿಳಿಸಿದರು.

ಸಾಲಗಾರರ ಕ್ಷೇತ್ರದಿಂದ 23 ಸದಸ್ಯರು ಮತ್ತು ಸಾಲಗಾರರಲ್ಲದ ಕ್ಷೇತ್ರದಿಂದ ಇಬ್ಬರು ಸದಸ್ಯರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಸಂಘದ ಚುನಾವಣಾಧಿಕಾರಿ ವಾಸಿಂ ಶರೀಫ್ ಸೋಮವಾರ ಎಲ್ಲಾ ಅಭ್ಯರ್ಥಿಗಳಿಗೂ ಚಿಹ್ನೆಗಳನ್ನು ನೀಡಿದರು.

ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮಾಡಲು ಸಂಘದ ಗುರುತಿನ ಚೀಟಿಯನ್ನು ತರಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.