ಹಿರೀಸಾವೆ: ಹೋಬಳಿಯ ದಿಡಗ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಉಳ್ಳಾವಳ್ಳಿ ಗ್ರಾಮದ ಎಚ್.ಕೆ.ಯೋಗೇಶ್ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆದು, ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಯೋಗೇಶ ಅವರ ಆಯ್ಕೆಯನ್ನು ಚುನಾವಣಾ ಅಧಿಕಾರಿ ವಿಜಯೇಂದ್ರ ಘೋಷಿಸಿದರು.

ಎಚ್.ಕೆ.ಯೋಗೇಶ್ ಮಾತನಾಡಿ, ‘ಶಾಸಕ ಸಿ.ಎನ್.ಬಾಲಕೃಷ್ಣ ಅವರ ಮಾರ್ಗದರ್ಶನ ಮತ್ತು ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸಂಘದಲ್ಲಿ 3,200 ಷೇರುದಾರರು ಇದ್ದಾರೆ. ಕೆಸಿಸಿ ₹13.64 ಕೋಟಿ, ಎಚ್ಎಸ್ವಿ ₹2.44 ಕೋಟಿ ಸಾಲವನ್ನು ನೀಡಲಾಗಿದೆ. ಇನ್ನೂ ಹೆಚ್ಚುವರಿಯಾಗಿ ₹3 ಕೋಟಿ ಸಾಲ ನೀಡಲು ಶಾಸಕರಿಗೆ ಮನವಿ ಮಾಡಲಾಗಿದೆ’ ಎಂದರು.

ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನೂತನ ಅಧ್ಯಕ್ಷರನ್ನು ಸ್ಥಳಿಯ ಮುಖಂಡರಾದ ಲಾಯರ್ ಪುಟ್ಟರಾಜು, ಎಂ.ಆರ್.ವಾಸು, ಉಗೇನಹಳ್ಳಿ ರಘುರಾಂ, ತಾತೇಗೌಡ, ಸಂಘ ಉಪಾಧ್ಯಕ್ಷ ಕುಮಾರ್, ನಿರ್ದೇಶಕರಾದ ಟಿ.ಎಸ್.ಮಧು, ಬಾಲು, ಎಚ್.ಎಸ್.ಮಹೇಶ್, ಲೋಕೇಶ್, ವೆಂಕಟೇಶ್, ಜಯಮ್ಮ, ಸುಮಿತ್ರ, ತುಳಸಿ, ಕಾರ್ಯ ನಿರ್ವಹಣಾಧಿಕಾರಿ ನಿಂಗಮ್ಮ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-36-1340536004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.