ಹಿರೀಸಾವೆ: ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಜನ್ಮದಿನದ ಪ್ರಯುಕ್ತ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ರೋಗಿಗಳಿಗೆ ಹಣ್ಣು, ಪೌಷ್ಟಿಕ ಆಹಾರಗಳು ಮತ್ತು ಔಷಧಿಗಳನ್ನು ವಿತರಿಸಿದರು.

ತಾಲ್ಲೂಕು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ.ಎನ್. ಮಂಜುನಾಥ್ ಮಾತನಾಡಿ, ‘ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಡಿಕೆಶಿ ಉಪ ಮುಖ್ಯಮಂತ್ರಿಗಳಾಗಿ ಜನಪರವಾದ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರು ಮುಖ್ಯ ಮಂತ್ರಿಯಾಗಬೇಕು ಎಂಬುದು ಪಕ್ಷದ ಕಾರ್ಯಕರ್ತರ ಆಶಯವಾಗಿದೆ. ಬೂತಮಟ್ಟದಿಂದ ಪಕ್ಷವನ್ನು ಬೆಳೆಸಲು ಹೆಚ್ಚು ಸಹಕಾರ ನೀಡಿದ್ದಾರೆ. ಅವರು ಸಿಎಂ ಆದರೆ ಕಾರ್ಯಕರ್ತರಿಗೆ ಪಕ್ಷವನ್ನು ಬಲಪಡಿಸಲು ಹೆಚ್ಚಿನ ಹುಮ್ಮಸ್ಸು ಇರುತ್ತದೆ’ ಎಂದರು.

ಹೋಬಳಿಯ ಕಾಂಗ್ರೆಸ್ ಮುಖಂಡರಾದ ಎಚ್.ಎಂ.ರಘು, ದಿಡಗ ರತ್ನರಾಜ್, ಶ್ರೀಧರ್, ಕುಮಾರ್, ಶಶಿಕುಮಾರ್, ರಂಗಸ್ವಾಮಿ, ಶೇಖರ್, ಕೃಷ್ಣಮೂರ್ತಿ, ಮೋಹನ್ ಸೇರಿದಂತೆ ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-36-2115234857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.