ಹಿರೀಸಾವೆ: ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಏಪ್ರಿಲ್–ಮೇ ತಿಂಗಳಲ್ಲಿ ಬೆಂಕಿ ಆಕಸ್ಮಿಕ ಪ್ರಕರಣಗಳು ಹೆಚ್ಚಾಗುತ್ತವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಮತ್ತು ಚಿಕ್ಕ ಬೆಂಕಿ ಎಂದು ನಿರ್ಲಕ್ಷ್ಯ ಮಾಡದೆ, ತಕ್ಷಣ ತುರ್ತು ಸೇವೆಗೆ ತಿಳಿಸಿ ಎಂದು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಕೆ.ಎಚ್. ಪುಟ್ಟಸ್ವಾಮಿ ಹೇಳಿದರು.

ಇಲ್ಲಿನ ಶ್ರೀಕಂಠಯ್ಯ ವೃತ್ತದಲ್ಲಿ ಚನ್ನರಾಯಪಟ್ಟಣ ಅಗ್ನಿಶಾಮಕ ಠಾಣೆ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಅಗ್ನಿಶಾಮಕ ಸೇವಾ ಸಪ್ತಾಹ’ದಲ್ಲಿ ಅವರು ಮಾತನಾಡಿದರು.

ಅಗ್ನಿ ಅವಘಡಗಳು ಸಂಭವಿಸಿದಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಜೀವ ಹಾನಿ ಮತ್ತು ಆರ್ಥಿಕ ನಷ್ಟವನ್ನು ತಡೆಯಬಹುದು. ಮನೆ ಮತ್ತಿತರ ಕಡೆಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ. ಸಿಲಿಂಡರ್ಗಳನ್ನು ಶೇಖರಿಸಬೇಡಿ. ವಿದ್ಯುತ್ನಿಂದ ಬೆಂಕಿ ಉಂಟಾದರೆ, ಮೊದಲು ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ಅಗ್ನಿ ನಂದಿಸಲು ನೀರಿನ ಬದಲು ಮರಳನ್ನು ಎರಚಬೇಕು. ತುರ್ತು ಸಮಯದಲ್ಲಿ 101 ಹಾಗೂ 112 ದೂರವಾಣಿ ಕರೆ ಮಾಡಿ, ಮಾಹಿತಿ ನೀಡಬೇಕು. ಹಲವು ರೀತಿಯ ಬೆಂಕಿ ಆಕಸ್ಮಿಕದ ಬಗ್ಗೆ ನಾಗರಿಕರಿಗೆ ತಿಳಿವಳಿಕೆಗಳನ್ನು ಹೇಳಿದರು.

ಅಗ್ನಿ ಠಾಣಾ ಸಿಬ್ಬಂದಿ ಸಿ.ಆರ್. ಪ್ರದೀಪ್ ಕುಮಾರ್, ಗಂಗಾಧರ್, ಹನುಮಂತು, ಬಿಮ್ಮಪ್ಪ ಇದ್ದರು. ಆಕಸ್ಮಿಕ ಬೆಂಕಿ ಉಂಟಾದಾಗ ಅನುಸರಿಸಬೇಕಾದ ಸುರಕ್ಷತೆಯ ಕ್ರಮಗಳ ಮಾಹಿತಿಯ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-36-1643239960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.