ಹಿರೀಸಾವೆ: ನರಸಿಂಹಸ್ವಾಮಿಯ ಪುನರ್ಜನ್ಮದ ಕ್ಷೇತ್ರ ಎನ್ನುವ ಹೋಬಳಿಯ ಬೆಳಗೀಹಳ್ಳಿಯಲ್ಲಿ ಕಂಬದ ನರಸಿಂಹಸ್ವಾಮಿಯ ರಂಗದ ಹಬ್ಬವನ್ನು ಒಂದು ವಾರ ಗ್ರಾಮದಲ್ಲಿರುವ ಎಲ್ಲ ಸಮುದಾಯದವರು ಒಟ್ಟುಗೂಡಿ ಭಕ್ತಿ ಭಾವದಿಂದ ಆಚರಿಸುತ್ತಾರೆ.

ಮಾ. 7ರಂದು ರಾತ್ರಿ ಬಾಳೆ ಕಂಬವನ್ನು ತಂದು ದೇವಸ್ಥಾನದಲ್ಲಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಹಬ್ಬ ಮುಗಿಯುವವರೆಗೆ ದೇವರು ಮೆರವಣಿಗೆ ಮಾಡುವ ಬೀದಿಗಳು ಮತ್ತು ರಂಗ ಮಂಟಪದ ಸುತ್ತ ಪಾದರಕ್ಷೆ ಹಾಕಿಕೊಂಡು ತಿರುಗುವಂತಿಲ್ಲ. ಗ್ರಾಮಸ್ಥರು ಮತ್ತು ಸ್ವಾಮಿಯ ಒಕ್ಕಲಿನವರು ಹಬ್ಬ ಮುಗಿಯುವರೆಗೆ ಮಾಂಸಾಹಾರ ಸೇವಿಸುವುದಿಲ್ಲ.

ನಿತ್ಯ ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಜನಪದ ನೃತ್ಯವಾದ ರಂಗದ ಕುಣಿತವನ್ನು ಕುಣಿಯುತ್ತಾರೆ.

ಮಾ.13ರಂದು ಜಾಗರಣೆ ಪ್ರಯುಕ್ತ ದಮ್ಮನಿಂಗಳ, ಹಡೇನಹಳ್ಳಿ, ನಾಗಯ್ಯನಕೊಪ್ಪಲು, ಎಚ್. ಚಿಕ್ಕೋನಹಳ್ಳಿ, ಎಚ್.ಹೊನ್ನೇನಹಳ್ಳಿ, ಹಿರೀಸಾವೆ ಮತ್ತು ತುರುವೇಕೆರೆ ತಾಲ್ಲೂಕಿನ ಹೊಡಿಕೆಘಟ್ಟ ಸೇರಿದಂತೆ ಹಲವು ಗ್ರಾಮಗಳಿಂದ ಜನರು ಬಂದು ರಂಗ ಕುಣಿಯುತ್ತಾರೆ.

ಮಾ.14ರಂದು ಮಧ್ಯಾಹ್ನ 2 ಗಂಟೆಗೆ ಕೆರೆಯ ಪಕ್ಕದಲ್ಲಿರುವ ಅಶ್ವತ್ಥ ವೃಕ್ಷದ ಬಳಿ ಗಂಗಾ ಪೂಜೆ ನೆರವೇರಿಸಿ, ಮಂಡೆ ಮತ್ತು ಬಾಯಿಬೀಗದ ಹರಕೆ ಸಲ್ಲಿಸುತ್ತಾರೆ. ಸಂಜೆ 8 ಗಂಟೆಗೆ ಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯುತ್ತದೆ. ನಂತರ ಮೂಡ್ಲಿಗಿರಿಯಪ್ಪನ ಹರಿಸೇವೆ ನಡೆಯುತ್ತದೆ.

ಭಕ್ತರು ಮತ್ತು ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನದ ಆವರಣದಲ್ಲಿ ಸಾಮೂಹಿಕವಾಗಿ ಅಡುಗೆ ತಯಾರಿಸಿ, 101 ಎಡೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ದೇವರ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಮುಗಿದ ನಂತರ ಮಧ್ಯರಾತ್ರಿ ಅನ್ನದಾನ ಮಾಡುವುದು ಹಬ್ಬದ ವಿಶೇಷ.

ಸುಮಾರು 40 ಗ್ರಾಮಗಳಲ್ಲಿ ವಾಸ ಇರುವ ಸ್ವಾಮಿಯ ಭಕ್ತರು ಹಬ್ಬದಲ್ಲಿ ಭಾಗಿಯಾಗುತ್ತಾರೆ. ಧಾರ್ಮಿಕ ಆಚರಣೆಗೆ ಎಲ್ಲ ರೀತಿಯಲ್ಲಿ ಸಹಕರಿಸುತ್ತಾರೆ
ದೇವರಾಜು ದೇವಸ್ಥಾನದ ಗುಡಿಗೌಡ

ಭಕ್ತಿ ಭಾವದಿಂದ ಒಂದು ವಾರ ಆಚರಿಸುವ ಹಬ್ಬದಲ್ಲಿ ನಿತ್ಯ ರಂಗವನ್ನು ಕುಣಿಯುತ್ತೇವೆ. ಜಾಗರಣೆ ದಿನ ಇತರೆ ಗ್ರಾಮದವರು ಬಂದು ರಂಗ ಕುಣಿಯುತ್ತಾರೆ
ಗೋವಿಂದು ಬೆಳಗೀಹಳ್ಳಿ ಗ್ರಾಮದ ಶಿಕ್ಷಕ

ಗ್ರಾಮ ಮತ್ತು ದೇವಸ್ಥಾನದ ಹಿನ್ನೆಲೆ

ಮಂಡ್ಯ ಜಿಲ್ಲೆಯ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಕ್ಯಾತನಹಳ್ಳಿಯ ಅರ್ಚಕರು ಗೋವುಗಳನ್ನು ಸಾಕಿದ್ದರು. ಅವುಗಳನ್ನು ಈ ಸ್ಥಳದಲ್ಲಿ ಮೇಯಿಸುತ್ತಿದ್ದರು. ಒಂದು ಬಿಳಿ ಹಸು ಸಂಜೆ ಸಮಯದಲ್ಲಿ ದನಗಳಿಂದ ದೂರ ಹೋಗಿ ಹುತ್ತ ಒಂದರ ಮೇಲೆ ನಿಂತು ಹಾಲನ್ನು ಅದರೊಳಕ್ಕೆ ಸುರಿಸುತ್ತಿತ್ತು. ಈ ದೃಶ್ಯವನ್ನು ನೋಡಿದ ದನ ಕಾಯುವವನು ಮನೆಯವರಿಗೆ ತಿಳಿಸಿದ. ಅದೇ ದಿನ ಹಸುವಿನ ಮಾಲೀಕರಿಗೆ ಇದೇ ರೀತಿಯ ಕನಸು ಬಿತ್ತು. ಮರುದಿನ ಈ ಜಾಗಕ್ಕೆ ಬಂದು ಸಂಜೆಯಿಂದ ಹುತ್ತದ ಸುತ್ತ ಬಿದ್ದಿದ್ದ ತರಗನ್ನು (ಮರದ ಒಣಗಿದ ಎಲೆಗಳು) ಸ್ವಚ್ಛ ಮಾಡಿ ಬೆಳಗಿನ ಜಾವಕ್ಕೆ ಸಣ್ಣ ದೇವಸ್ಥಾನ ನಿರ್ಮಾಣ ಮಾಡಿದರು. ಬೆಳಗಿನ ಬೆಳಕಿಗೆ ಬಂದ ಗ್ರಾಮವೇ ‘ಬೆಳಗೀಹಳ್ಳಿ’ ಮತ್ತು ಶಾಸನಗಳ ಪ್ರಕಾರ ಜೈನ ಧರ್ಮದ ಗ್ರಾಮ ಎಂಬ ಐತಿಹ್ಯವಿದೆ ಎಂದು ಗ್ರಾಮದ ಶಿಕ್ಷಕ ಗೋವಿಂದು ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.