ಹಿರೀಸಾವೆ: ನಿಮ್ಮ ಜೀವ ಮತ್ತು ಕುಟುಂಬದ ಸುರಕ್ಷತೆಗಾಗಿ ರಸ್ತೆ ನಿಯಮಗಳನ್ನು ಪಾಲಿಸಿ, ಅಪಘಾತಗಳನ್ನು ತಪ್ಪಿಸಿ ಎಂದು ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯ ಎಸ್ಐ ಚರಣ್ಗೌಡ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ‘ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಅರಿವು ಹಾಗೂ ರಕ್ತದಾನ, ಕಣ್ಣಿನ ತಪಾಸಣಾ ಶಿಬಿರ’ದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಸೇರಿ ಬಹುತೇಕ ರಸ್ತೆಗಳಲ್ಲಿ, ವಾಹನ ಚಾಲಕರು ಮತ್ತು ಪಾದಚಾರಿಗಳು ಸಂಚಾರ ನಿಯಮಗಳನ್ನು ಪಾಲಿಸದೆ ಇರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದಿನಕ್ಕೆ ಕಡಿಮೆ ಎಂದರೂ 4 ರಿಂದ 6 ಅಪಘಾತಗಳು ಸಂಭವಿಸುತ್ತಿವೆ. ಇದರಲ್ಲಿ ಯುವ ಜನತೆ ಹೆಚ್ಚು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಾಲ್ಲೂಕಿನಲ್ಲಿ ಬೈಕ್ ಮತ್ತು ವಾಹನ ಚಲಾಯಿಸುವರರಲ್ಲಿ ಶೇ 75 ರಷ್ಟು ಜನರು ಚಾಲನ ಪರವಾನಿಗೆ ಹೊಂದಿಲ್ಲ. ಅವರ ವಾಹನಗಳಿಗೆ ವಿಮೆ ಇರುವುದಿಲ್ಲ. ಅಪಘಾತವಾದಾಗ ಕುಟುಂಬದವರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಚ್.ಜಿ. ಭರತ್ ಕುಮಾರ್ ಮಾತನಾಡಿ, ಒಬ್ಬರು ರಕ್ತ ದಾನ ಮಾಡುವುದರಿಂದ ನಾಲ್ಕು ಜನರ ಪ್ರಾಣ ಉಳಿಸಲು ಸಹಾಯವಾಗುತ್ತದೆ. ರಕ್ತ ತಯಾರಿಸಲು ಸಾಧ್ಯವಿಲ್ಲ, ದಾನವಾಗಿ ಪಡೆಯುವುದು ಅವಶ್ಯ ಎಂದರು.

ಪ್ರಾಂಶುಪಾಲ ಲಕ್ಷ್ಮಣಗೌಡ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ಸಿ.ಎಸ್. ಕಿಶೋರ್ ಕುಮಾರ್, ಜಬಿವುಲ್ಲಾ ಬೇಗ್, ಉದಯಕುಮಾರ್, ಮಂಜುನಾಥ್, ಉಪನ್ಯಾಸಕರಾದ ಹರೀಶ್, ಮಂಜುನಾಥ್ ಮಾತನಾಡಿದರು.

ಕಾಲೇಜಿನ 32 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-36-1583034392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.