ಹೊಳೆನರಸೀಪುರ: ತಾಲ್ಲೂಕಿನ ಹಳ್ಳಿಮೈಸೂರು ಕ್ಯಾತನಹಳ್ಳಿ, ಮಲ್ಲಪ್ಪನಹಳ್ಳಿ, ತಾತನಹಳ್ಳಿ, ಹಳ್ಳಿಮೈಸೂರು ಹಾಗೂ ನಗರನಹಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.
ಹಳ್ಳಿಮೈಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಎನ್.ವಿಶ್ವನಾಥ್ ಹಾಗೂ ಉಪಾಧ್ಯಕ್ಷರಾಗಿ ಜಯಮ್ಮ ಪರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಸುರೇಶ್ ಹಾಗೂ ಉಪಾಧ್ಯಕ್ಷರಾಗಿ ಶೋಭಾ, ಮಲ್ಲಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪುಟ್ಟೇಗೌಡ ಹಾಗೂ ಉಪಾಧ್ಯಕ್ಷರಾಗಿ ಭಾರತಿ ಅವಿರೋಧವಾಗಿ ಆಯ್ಕೆಯಾದರು.
ತಾತನಹಳ್ಳಿ ಗ್ರಾಮ ಪಂಚಾಯಿತಿಯ 14 ಸದಸ್ಯರಲ್ಲಿ ಗುರುಮೂರ್ತಿ ಹಾಗೂ ಜಗದೀಶ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅಧ್ಯಕ್ಷರಾಗಿ ಚುನಾಯಿತರಾದ ಜಗದೀಶ್ 8 ಮತಗಳನ್ನು ಪಡೆದರು. ಉಪಾಧ್ಯಕ್ಷರಾಗಿ ವೀಣಾ ಅವಿರೋಧವಾಗಿ ಆಯ್ಕೆಯಾದರು.
ನಗರನಹಳ್ಳಿ ಪಂಚಾಯಿತಿಯ 17 ಸದಸ್ಯರಲ್ಲಿ ಶಶಿಕಲಾ ಹಾಗೂ ಅನುಸೂಯಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಹಾಗೂ ಮಂಜುನಾಥಶೆಟ್ಟಿ ಸ್ಪರ್ಧಿಸಿದ್ದರು. ಚುನಾಯಿತರಾದ ಶಶಿಕಲಾ 9 ಮತಗಳನ್ನು ಪಡೆದರೆ, ಸುರೇಶ್ 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.