ಹೊಳೆನರಸೀಪುರ: ತಾಲ್ಲೂಕು ಆಡಳಿತ ಮತ್ತು ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಟ್ರಸ್ಟ್ ವತಿಯಿಂದ ಬಾಬಾಸಾಹೇಬರ 135ನೇ ಜನ್ಮದಿನಾಚರಣೆಯನ್ನು ಏಪ್ರಿಲ್ 14 ರಂದು ಮಂಗಳವಾರ ವೈಭವವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಟ್ರಸ್ಟಿನ ಗೌರವಾಧ್ಯಕ್ಷ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ವೈ, ಚಂದ್ರಶೇಖರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಆರ್.ಅಂಬೇಡ್ಕರ್ ನಗರ ದಿಂದ ಬಾಬಾ ಸಾಹೇಬರ ಭಾವಚಿತ್ರದ ಮೆರವಣಿಗೆ ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗುತ್ತದೆ. ಮೆರವಣಿಗೆಯಲ್ಲಿ ಮಂಗಳೂರಿನ 14 ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸುತ್ತಿವೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಬಗೆಬಗೆಯ ನೃತ್ಯ ರೂಪಕ, ಬಾಬಾ ಸಾಹೇಬರ ವಿಚಾರಧಾರೆ ಕುರಿತ ಸ್ತಬ್ಧ ಚಿತ್ರಗಳು ಇರಲಿವೆ ಎಂದರು.

ಮಧ್ಯಾಹ್ನ 3 ಗಂಟೆಗೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ವೇದಿಕೆಯಲ್ಲಿ ಸ್ಥಳೀಯ ಮತ್ತು ಜಿಲ್ಲಾ ಮಟ್ಟದ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಕೀಲ ಕೆ.ಕೆ.ರಾಜಶೇಖರಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.

ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ತಾರೇಶ್, ಉಪಾಧ್ಯಕ್ಷ ಎಚ್.ಟಿ. ಲಕ್ಷ್ಮಣ, ಜಂಟಿ ಕಾರ್ಯದರ್ಶಿ ಸುಪ್ರಿತ್ ಪಾಸ್ವಾನ್ ಮಾತನಾಡಿದರು. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸದಸ್ಯ ಜವರೇಶ್, ಪುರಸಭೆ ಮಾಜಿ ಸದಸ್ಯರಾದ ಎಚ್.ಡಿ.ಉಮೇಶ್, ರಾಘವೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-36-1383942091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.