ಹೊಳೆನರಸೀಪುರ: ಬಿಜೆಪಿ ಪರಾಭವಗೊಳ್ಳಲು ನಕಲಿ ಮತಗಳು ಕಾರಣ ವಾಗಿದ್ದು, ಯಾವ ಅಭ್ಯರ್ಥಿಗಳೂ ನಕಲಿ ಮತಗಳಿಂದ ಗೆಲ್ಲಲು ಹಾಗೂ ಸೋಲಲು ಅವಕಾಶ ಆಗಬಾರದು ಎನ್ನುವ ಕಾರಣಕ್ಕೆ ಎಸ್ಐಆರ್ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ನಕಲಿ ಮತದಾರ ಕೈ ಬಿಡಲು ಸಹಕಾರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಹೇಳಿದರು.

ಪಟ್ಟಣದ ಪಿ.ಆರ್ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಬಿಜೆಪಿಯಿಂದ ಶನಿವಾರ ಆಯೋಜಿಸಿದ್ದ ಬಿಎಲ್ಒ 2 ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಹಾರದಲ್ಲಿ 40 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಮತದಾರರಪಟ್ಟಿಯಿಂದ ಕೈ ಬಿಡಲಾಗಿದೆ. ಅರ್ಹ ಮತದಾರರನ್ನು ಗುರುತಿಸಿ ಅವರಿಗೆ ಮಾತ್ರ ಮತದಾನದ ಅವಕಾಶ ದೊರಕಿಸಿಕೊಡಲು ಈ ವಿಶೇಷ ಪರಿಷ್ಕರಣೆ ಸಹಾಯ ಆಗುತ್ತದೆ’ ಎಂದರು.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ 325 ಬೂತ್ಗಳಲ್ಲಿಯೂ ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಬಿಎಲ್ಒ 2ರ ಸಂಪೂರ್ಣ ನೇಮಕ ಆಗಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಅಮಿತ್ ಶೆಟ್ಟಿ, ಮಂಡಲ ಅಧ್ಯಕ್ಷ ಶ್ರೀನಿವಾಸ್ (ಶ್ರೀಪತಿ), ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಕೆ.ಅಮಿತ್ಗೌಡ, ಮಂಡಲ ಮಾಜಿ ಅಧ್ಯಕ್ಷ ರಾಜುಗೌಡ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಇಂದಿರಮ್ಮ ಮಾತನಾಡಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಂಕವಳ್ಳಿ ಮೋಹನ್, ಪ್ರಸಾದ್, ಎಚ್.ಪಿ.ದೀಪಕ್, ದಂಡಿಗನಹಳ್ಳಿ ದೇವರಾಜು, ಹರಿಹರಪುರ ವೆಂಕಟೇಶ್, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಗೌರಮ್ಮ, ರಮಾ, ರಾಜೇಶ್ವರಿ, ನಾಗರತ್ನಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-36-1013876579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.