ಹೊಳೆನರಸೀಪುರ: ಪಶು ಇಲಾಖೆಯ ಇನ್ಸ್ಪೆಕ್ಟರ್, ಹರದೂರಿನ ಹರೀಶ್ ಅವರ ಪುತ್ರ ಗೌತಮ್ ಎಚ್.ಆರ್. (15) ಹೇಮಾವತಿ ನದಿಯಲ್ಲಿ ಈಜಲು ಹೋಗಿ ಮಂಗಳವಾರ ಸಂಜೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಪಟ್ಟಣದ ಸೋಷಿಯಲ್ ಕ್ಲಬ್ ಸಮೀಪದ ಹೇಮಾವತಿ ನದಿಯಲ್ಲಿ ಸ್ನೇಹಿತರ ಜೊತೆಗೂಡಿ ಮಂಗಳವಾರ ಸಂಜೆ 5 ಗಂಟೆಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬಾಲಕನ ಶವವನ್ನು ಹೊರ ತೆಗೆದಿದ್ದಾರೆ.

ತಾಲ್ಲೂಕಿನ ತಟ್ಟೆಕೆರೆಬಾರೆ ಆದರ್ಶ ವಿದ್ಯಾಲಯದಲ್ಲಿ 9ನೇ ತರಗತಿ ತೇರ್ಗಡೆಯಾಗಿದ್ದ ಗೌತಮ್, ಅಂಡರ್ 16 ವಯೋಮಿತಿಯ ಕ್ರಿಕೆಟ್ನಲ್ಲಿ ಭಾಗವಹಿಸಿ, ಉತ್ತಮ ಬ್ಯಾಟ್ಸ್ಮನ್ ಎಂಬ ಪ್ರಶಂಸೆಗೆ ಪಾತ್ರನಾಗಿದ್ದ. ಅಂತರಜಿಲ್ಲಾ ಕ್ರಿಕೆಟ್ ಟೂರ್ನಿಯ ಪಂದ್ಯಗಳಲ್ಲಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಪಡೆದಿದ್ದ. ಏಕೈಕ ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-36-617182714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.