ಹೊಳೆನರಸೀಪುರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ಬೆಂಗಳೂರಿಗೆ ತೆರಳಲು ಬಸ್ಗಳಿಲ್ಲದೇ ಪರದಾಡುವಂತಾಯಿತು.

250ಕ್ಕೂ ಹೆಚ್ಚು ಪ್ರಯಾಣಿಕರು ಹಲವು ಗಂಟೆಗಳಿಂದ ಬೆಂಗಳೂರಿಗೆ ತೆರಳಲು ಕಾಯುತ್ತಿದ್ದರೂ, ಬಸ್ಗಳು ಬರಲಿಲ್ಲ. ಸುಸ್ತಾದ ಪ್ರಯಾಣಿಕರು ಘಟಕ ವ್ಯವಸ್ಥಾಪಕ ಪಾಪ ನಾಯಕ್ ಅವರಿಗೆ ಕರೆ ಮಾಡಿ, ಬೆಂಗಳೂರಿಗೆ ಹೋಗಲು ಬಸ್ಗಳಿಲ್ಲದೇ ಜನ ಪರದಾಡುತ್ತಿದ್ದಾರೆ. ಬಸ್ ವ್ಯವಸ್ಥೆ ಮಾಡಿ ಎಂದು ಕೇಳಿದರು. ಆದರೆ, ಪಾಪ ನಾಯಕ್ ಅವರು, ಇಲ್ಲಿಂದ ಯಾವುದೇ ಬಸ್ ವ್ಯವಸ್ಥೆ ಮಾಡಲು ಸಾಧ್ಯ ಇಲ್ಲ ಎಂದು ನಿರಾಕರಿಸಿದರು.

ವ್ಯವಸ್ಥಾಪಕರು ಘಟಕದಲ್ಲಿದ್ದರೂ, ಪ್ರಯಾಣಿಕರಿಗೆ ಪ್ರಯೋಜನವಾಗುವುದಿಲ್ಲ. ಗ್ರಾಮೀಣ ಪ್ರದೇಶದ ಬಸ್ಗಳು ಸರಿಯಾಗಿ ಸಂಚರಿಸುತ್ತಿಲ್ಲ. ಈ ಬಗ್ಗೆ ಹಿಂದೆ ವಿದ್ಯಾರ್ಥಿಗಳು ಮುಷ್ಕರ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಜನರು ದೂರಿದರು.

ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಜನಸ್ಪಂದನ ವೇದಿಕೆಯ ಸುರೇಶ್ಕುಮಾರ್, ವಿದ್ಯಾರ್ಥಿ ಮುಖಂಡ ಅಮಿತ್ ವಿನಂತಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-36-184987755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.