ಪ್ರಜಾವಾಣಿ ವಾರ್ತೆ

ಹೊಳೆನರಸೀಪುರ: ತಾಲ್ಲೂಕಿನ ಬಸವನಾಯಕನಹಳ್ಳಿಗೆ ಭಾನುವಾರ ಭೇಟಿ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಈಚೆಗೆ ನಿಧನರಾದ ಸಹೋದರಿ ಜವರಮ್ಮ ಅವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗ್ರಾಮದ ಸಹೋದರಿಯ ಮನೆಗೆ ಭೇಟಿ ನೀಡಿದ ದೇವೇಗೌಡರು, ಹನ್ನೊಂದು ದಿನಗಳ ಹಿಂದೆ ಅನಾರೋಗ್ಯದಿಂದ ನಿಧನರಾದ ಜವರಮ್ಮ ಅವರ ತಿಥಿ ಕಾರ್ಯದಲ್ಲಿ ಪಾಲ್ಗೊಂಡು ಸಮಾಧಿಗೆ ಪೂಜೆ ಸಲ್ಲಿಸಿದರು.

ದೆಹಲಿಯಲ್ಲಿದ್ದ ಕಾರಣ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಸಹೋದರಿಯ ಸಮಾಧಿಗೆ ಪೂಜೆ ಸಲ್ಲಿಸುವ ವೇಳೆ ಭಾವುಕರಾದ ದೇವೇಗೌಡರು, ಕಣ್ಣೀರು ಹಾಕುತ್ತಲೇ ವಿಧಿವಿಧಾನಗಳನ್ನು ನೆರವೇರಿಸಿದರು. ಅವರೊಂದಿಗೆ ಕುಟುಂಬಸ್ಥರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ದೇವೇಗೌಡರು, ‘ಮೊದಲ ಮಗ ನಾನು. ಜವರಮ್ಮ ನನಗೆ ಎರಡನೇ ತಂಗಿ. ನನ್ನಿಗಿಂತ ಮೂರು ವರ್ಷ ಕಿರಿಯವಳು. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಸಂದೇಶ ಕಳುಹಿಸಿದ್ದಾರೆ. ಸಾಮಾನ್ಯ ಕುಟುಂಬದ ಹಳ್ಳಿಯ ಮಹಿಳೆಗೆ ಗೌರವದಿಂದ ಸಂತಾಪ ಸೂಚಿಸಿರುವುದು ಅವರ ಸೂಕ್ಷ್ಮ ಮನಸ್ಸನ್ನು ತೋರಿಸುತ್ತದೆ. ನಮ್ಮ ಕುಟುಂಬದ ಪರವಾಗಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಈ ಭಾವನೆಯನ್ನು ಜೀವನದಲ್ಲಿ ಮರೆಯುವುದಿಲ್ಲ’ ಎಂದು ಹೇಳಿದರು.

‘ಇನ್ನೂ ಮೂರು ದಿನ ಸಂಸತ್ ಅಧಿವೇಶನ ಇರುವುದರಿಂದ, ಬಳಿಕ ರಾಜಕೀಯ ವಿಷಯಗಳ ಕುರಿತು ಮಾತನಾಡುತ್ತೇನೆ’ ಎಂದರು.

ಎಚ್.ಡಿ. ರೇವಣ್ಣ ಸಹ ಸೋದರತ್ತೆ ಸಮಾಧಿಗೆ ಪೂಜೆ ಸಲ್ಲಿಸಿ, ಕುಟುಂಬ ಸದಸ್ಯರೊಂದಿಗೆ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-36-159112778

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.