ಹೊಳೆನರಸೀಪುರ: ಪಟ್ಟಣದ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹27 ಲಕ್ಷ ಮೌಲ್ಯದ 30 ಟನ್ ‘ಅಕೇಶಿಯಾ ಕಟೇಚು’ ಮರದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಕ್ತಚಂದನ ಮಾದರಿಯ ಮರದ ತುಂಡುಗಳು ಇವಾಗಿವೆ. ಇವುಗಳನ್ನು ಅಕ್ರಮವಾಗಿ ತರಲಾಗಿದೆ ಎಂದು ಬಡಾವಣೆಯ ಕೆಲವರು ಮಾಹಿತಿ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಆರ್ಎಫ್ಒ ದಿಲೀಪ್, ‘ಇದು ಬೀದರ್ನಿಂದ ಬಂದಿದೆ. ಪರವಾನಗಿ ಇದೆ’ ಎಂದು ತಿಳಿಸಿದ್ದರು.

ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸ್ಥಳೀಯರು, ‘ಇಲ್ಲಿಂದ ಬೇರೆಡೆಗೆ ಸಾಗಿಸಲಾಗುತ್ತಿದೆ’ ಎಂದು ತಿಳಿಸಿದ್ದರು. ಈ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದರು.

‘30 ಟನ್ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಬೀದರ್ನಲ್ಲಿ ನೀಡಿದ್ದ ಪರವಾನಗಿ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಎಫ್ಐಆರ್ ದಾಖಲಿಸುತ್ತೇವೆ’ ಎಂದು ಆರ್ಎಫ್ಒ ದಿಲೀಪ್ ತಿಳಿಸಿದ್ದಾರೆ.

ವಶಕ್ಕೆ ಪಡೆದ ಮರದ ತುಂಡುಗಳನ್ನು ಹಾಸನದ ಗೋದಾಮಿಗೆ ಸಾಗಿಸಲಾಗಿದೆ.

‘ಶ್ರೀಗಂಧ, ರಕ್ತಚಂದನ ನಂತರ ಹೆಚ್ಚಿನ ಮೌಲ್ಯ ಅಕೇಷಿಯಾ ಕಟೇಚು ಮರಕ್ಕಿದೆ. ಅದರ ತುಂಡುಗಳಿಂದ ತಯಾರಾದ ವಸ್ತುಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುತ್ತವೆ’ ಎಂದು ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.

‘ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಾಗಾಟಕ್ಕೆ ಬಳಸಿದ್ದ ಲಾರಿಯ ಪರವಾನಗಿಯನ್ನೂ ಪರಿಶೀಲಿಸಬೇಕು’ ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-36-620561477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.