ಹೊಳೆನರಸೀಪುರ: ತಾಲ್ಲೂಕಿನ ಎಚ್.ಹಿಂದಲಹಳ್ಳಿಯ ಪುಟ್ಟರಾಮೇಗೌಡ ಎಂಬುವವರ ಮನೆ ಕಾಂಪೌಂಡ್ ಒಳಗೆ ಚಿರತೆ ನುಗ್ಗಿ ನಾಯಿಗಳ ಮೇಲೆ ದಾಳಿ ನಡೆಸಲು ಮುಂದಾಗಿರುವ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಿಂದಾಗಿ ಕುಟುಂಬ ಸದಸ್ಯರ ಜತೆಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಹಳ್ಳಿಮೈಸೂರು ಹೋಬಳಿಯ ಕ್ಯಾತನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಎಚ್.ಹಿಂದಲಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟರಾಮೇಗೌಡ ಅವರ ಮನೆಗೆ ಚಿರತೆ ಒಂದು ತಿಂಗಳಲ್ಲಿ ಎರಡು ಬಾರಿ ಬಂದಿದ್ದು, ಅವರ ಮನೆಯಲ್ಲಿದ್ದ ನಾಯಿಗಳನ್ನು ಅಟ್ಟಾಡಿಸಿರುವ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ದಾಳಿ ಸಂಬಂಧ ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂದು ದೂರಿರುವ ಗ್ರಾಮಸ್ಥರು, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಚಿರತೆಯಿಂದ ಅನಾಹುತ ನಡೆದರೆ ಅರಣ್ಯ ಇಲಾಖೆಯವರೇ ಹೊಣೆ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-1670507855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.