ಹೊಳೆನರಸೀಪುರ: ತಾಲ್ಲೂಕಿನ ಎಸ್.ಅಂಕನಹಳ್ಳಿ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಡಿ. ರೇವಣ್ಣ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ರಸ್ತೆ ಡಾಂಬರೀಕರಣಕ್ಕೆ 3 ವರ್ಷದ ಹಿಂದೆ ₹ 1 ಕೋಟಿಗೆ ಟೆಂಡರ್ ಕರೆಯಲಾಗಿತ್ತು. ಕಾಂಗ್ರೆಸ್ ಸರ್ಕಾರ ಯಾವುದೇ ಕಾಮಗಾರಿಗೆ ಹಣ ನೀಡುತ್ತಿಲ್ಲ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರ ಮನವೊಲಿಸಿ ಈ ರಸ್ತೆ ಕೆಲಸ ಮಾಡಿಸುತ್ತಿದ್ದೇನೆ’ ಎಂದರು.

‘ಕಾಂಗ್ರೆಸ್ ಸರ್ಕಾರ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ. ಕನಿಷ್ಠ ಗುಂಡಿ ಮುಚ್ಚಲೂ ಹಣ ನೀಡುತ್ತಿಲ್ಲ. ಚನ್ನರಾಯಪಟ್ಟಣ ರಸ್ತೆ ಗುಂಡಿ ಮುಚ್ಚಲು ₹75 ಲಕ್ಷಕ್ಕೆ ಟೆಂಡರ್ ಆಗಿ ಕೆಲಸವನ್ನು ಪ್ರಾರಂಭಿಸಿದ್ದ ಗುತ್ತಿಗೆದಾರ ಅಪೂರ್ಣ ಕಾಮಗಾರಿ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಕ್ರಮ ಕೈಗೊಳ್ಳದೇ, ಸುಮ್ಮನಿದ್ದಾರೆ’ ಎಂದು ದೂರಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟೇಗೌಡ, ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-36-161241542

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.