ಈ ಒಳಾಂಗಣ ಕ್ರೀಡಾಂಗಣವನ್ನು ರಾಷ್ಟ್ರಮಟ್ಟದ ಅತ್ಯುತ್ತಮ ಕ್ರೀಡಾಂಗಣ ಮಾಡುವ ಉದ್ದೇಶದಿಂದ 2017 ರಲ್ಲಿ ಕ್ರಿಯಾಯೋಜನೆ ತಯಾರಿಸಿದ್ದೇವು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಬಿಡುಗಡೆ ಮಾಡಿದ ₹4.5 ಕೋಟಿ ವೆಚ್ಚದಲ್ಲಿ ಇಷ್ಟು ಕೆಲಸಗಳಾಗಿವೆ ಎಂದು ಶಾಸಕ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ.
ಈಜುಕೊಳದ ಕಾಮಗಾರಿ ಶೇ 70 ರಷ್ಟು ಮುಕ್ತಾಯವಾಗಿದ್ದು, ಇನ್ನುಳಿದ ಕೆಲಸಗಳು ಬಾಕಿ ಉಳಿದಿವೆ
ಈ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪ್ರಾರಂಭವಾದಾಗ, ಸಂತಸ ಪಟ್ಟಿದ್ದೆವು. ಆದರೆ ಕಾಮಗಾರಿ 3 ವರ್ಷದಿಂದ ನಿಂತು ಹೋಗಿದ್ದು, ನಿರಾಸೆ ಉಂಟಾಗಿದೆ. ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು
ನರೇಂದ್ರಬಾಬು, ಕ್ರೀಡಾಪಟು
ಸದ್ಯ ಸೋಷಿಯಲ್ ಕ್ಲಬ್ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದೇವೆ. ಹೇಮಾವತಿ ಕ್ರೀಡಾಂಗಣದ ಕಾಮಗಾರಿ ಪೂರ್ಣಗೊಳಿಸಿದರೆ ಅನುಕೂಲ
ಎಚ್.ಆರ್. ಅರ್ಜುನ್, ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಆಟಗಾರ
ಬಾಕಿ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹಣ ಬಿಡುಗಡೆ ಆಗುವ ನಿರೀಕ್ಷೆ ಇದ್ದು, ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ