ಹೊಳೆನರಸೀಪುರ: ‘ಶಿಕ್ಷಣ ಕಲಿಸಿದ ಗುರುಗಳಿಂದ ಬದುಕು ಕಟ್ಟಿಕೊಂಡ ನಾವೆಲ್ಲರೂ ನಮ್ಮ ಜೀವನದಲ್ಲಿ ಶಿಕ್ಷಕರನ್ನು ಮರೆಯಲು ಸಾಧ್ಯವೇ ಇಲ್ಲ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಬಣ್ಣಿಸಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಎಂ.ಎ.ಎ.ಕೆ. ಸರ್ಕಾರಿ ಶಾಲೆ ಶತಮಾನ ಪೂರೈಸಿದ್ದು ಈ ಶಾಲೆಯಲ್ಲಿ 50 ವರ್ಷಗಳ ಹಿಂದೆ 1ನೇ ತರಗತಿಗೆ ಸೇರಿದ್ದ ವಿದ್ಯಾರ್ಥಿಗಳು ನಿವೃತ್ತರಾಗಿರುವ ಅಂದಿನ ಶಿಕ್ಷಕರನ್ನು ಹಾಗೂ ಈ ಶಾಲೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗವಾದ ಎಲ್ಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲ ಶಿಕ್ಷಕ, ಶಿಕ್ಷಕಿಯರಿಗೆ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಈ ಗೌರವ ಶಿಕ್ಷಕರಿಗೆ ಮಾತ್ರ ಸಿಗುತ್ತದೆ. ಇಂತಹ ಕಾರ್ಯಕ್ರಮ ಏರ್ಪಡಿಸಿ ನಿಮ್ಮ ಶಿಕ್ಷಕರನ್ನೆಲ್ಲ ಗುರುಗಳ ಸ್ಥಾನದಲ್ಲಿಟ್ಟು ಗೌರವಿಸಿರುವುದು ಶ್ಲಾಘನೀಯ ಕಾರ್ಯ. ನಿಮ್ಮ ಈ ಕಾರ್ಯಕ್ರಮ ನೋಡಿದ ನಂತರ ನಾನೂ ನನ್ನ ಜೊತೆ ಓದುತ್ತಿದ್ದ ಗೆಳೆಯರನ್ನೆಲ್ಲ ಸೇರಿಸಿ ನನಗೆ ವಿದ್ಯೆ ಕಲಿಸಿದ ಗುರುಗಳಿಗೆ ಇಂತಹದೇ ಗುರುವಂದನೆ ಸಲ್ಲಿಸಲು ನಿರ್ಧರಿಸಿದ್ದೇನೆ. ನಿಮ್ಮ ಈ ಕಾರ್ಯಕ್ರಮ ನನಗೆ ಪ್ರೇರಣೆ ನೀಡಿದೆ’ ಎಂದರು.

ಶಿಕ್ಷಕರು ತಮ್ಮ ಸೇವಾ ಅವಧಿಯಲ್ಲಿ ವಿದ್ಯೆ ಕಲಿಸಿದ ವಿದ್ಯಾರ್ಥಿಗಳೆಲರನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯ ಇಲ್ಲ. ಆದರೆ ವಿದ್ಯೆ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯೆ ಕಲಿಸಿದ, ನೀತಿ ಹೇಳಿದ ಶಿಕ್ಷಕರನ್ನು ಜೀವಿತಾವಧಿವರೆಗೆ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ನೊಬಲ್ ವೃತ್ತಿ ಶಿಕ್ಷಕ ವೃತ್ತಿ ಎಂದರು.

ಶಾಲೆಯ ಮುಖ್ಯಶಿಕ್ಷಕ ಮಹೇಶಪ್ಪ ಮಾತನಾಡಿದರು.

ಶಿಕ್ಷಕರಾದ ಎಂ.ಕೆ. ಗುರುವಯ್ಯ, ಸುಶೀಲಮ್ಮ, ಎಚ್.ಟಿ. ನಾಗರತ್ನ, ಬೋಜರಾಜ್, ಪದ್ಮಜಾ, ಪ್ರೇಮಾ ಸೇರಿ ಹಲವರನ್ನು ಸನ್ಮಾನಿಸಲಾಯಿತು. ಚಂದನಾ ಕಾರ್ಯಕ್ರಮ ನಿರೂಪಿಸಿ, ರಾಮಚಂದ್ರ ಬಂಡೆ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-36-1386873140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.