ಭಾನುವಾರ, ಅಕ್ಟೋಬರ್ 25, 2020
23 °C
ಸುರಕ್ಷತೆಯೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ: ಪೂರ್ವಭಾವಿ ಸಮಿತಿ ಸಭೆಯಲ್ಲಿ ತೀರ್ಮಾನ

ಹಾಸನ: ಕೊರೊನಾ ವಾರಿಯರ್‌ಗಳಿಗೆ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕೋವಿಡ್‌-19 ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತಾ ಕ್ರಮದೊಂದಿಗೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು
ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜರಾಂ ಅವರು ಮಾತನಾಡಿ, ಕೋವಿಡ್ ಆತಂಕಗಳ ನಡುವೆ ಶಿಷ್ಟಾಚಾರಕ್ಕೆ ತೊಂದರೆ ಆಗದಂತೆ ರಾಜ್ಯೋತ್ಸವ ಆಚರಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉಸ್ತುವಾರಿ ಸಚಿವರು ಧ್ವಜರೋಹಣ ನೆರವೇರಿಸಿ, ಸಂದೇಶ ನೀಡುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಶಾಲಾ ಮಕ್ಕಳು ಭಾಗವಹಿಸುವಂತಿಲ್ಲ. ಸಾರ್ವಜನಿಕರು
ಇಚ್ಚಿಸಿದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಬಹುದು. ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸಮಾರಂಭದಲ್ಲಿ
ಭಾಗವಹಿಸಬೇಕು ಎಂದು ಹೇಳಿದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಗುವುದು. ಕೋವಿಡ್ ವಾರಿಯರ್ಸ್‍ಗಳಿಗೂ ಗೌರವ ಸಲ್ಲಿಸಲಾಗುವುದು. ಇಲಾಖಾ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಲೋಪವಿಲ್ಲದಂತೆ ನಿರ್ವಹಿಸಬೇಕು. ಲೋಕೋಪಯೋಗಿ ಇಲಾಖೆ, ನಗರಸಭೆ ಇಲಾಖೆಗಳ ವತಿಯಿಂದ ವೇದಿಕೆ ನಿರ್ಮಾಣ ಮಾಡಬೇಕು ಎಂದರು.

ನ. 5 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಇರುವುದರಿಂದ ಅ.31 ರಿಂದಲೇ ನಗರದ ಪ್ರಮುಖ ವೃತ್ತಗಳಲ್ಲಿ ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ದೀಪಾಲಂಕಾರ ಮಾಡಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಮಾಜಿಕ ಕಾರ್ಯಕರ್ತರ ಡಾ. ಗುರುರಾಜ್ ಹೆಬ್ಬಾರ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು