ಪ್ರಜಾವಾಣಿವಾರ್ತೆ

ಚನ್ನರಾಯಪಟ್ಟಣ: ತಾಲ್ಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಟ್ಯಾಂಕ್ ಪಕ್ಕದಲ್ಲಿ ಕೊಳವೆಬಾವಿ ಕೊರೆಯಲಾಗಿದ್ದು, ಅದರ ಮೂಲಕ ಟ್ಯಾಂಕ್ಗೆ 25 ಸಾವಿರ ಲೀಟರ್ ನೀರು ತುಂಬಲಾಗುತ್ತದೆ. ಇದಕ್ಕಾಗಿ ಸೌರ ವಿದ್ಯುತ್ ಅಳವಡಿಸಲಾಗಿದ್ದು, ರಾಜ್ಯದಲ್ಲಿ ಇದು ಹೊಸ ಪ್ರಯೋಗ. ಇದರಿಂದ ವಿದ್ಯುತ್ ಉಳಿತಾಯ ಆಗುತ್ತದೆ. ನೀರು ಪೂರೈಕೆಗೆ 94 ಮನೆಗಳ ಬಳಿ ಕುಡಿಯುವ ನೀರು ನಳ ಸಂಪರ್ಕ ಕಲ್ಪಿಸಲಾಗಿದೆ. 7.5 ಎಚ್.ಪಿ. ಮೋಟರ್ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಸೌರ ವಿದ್ಯುತ್ ಅಳವಡಿಸಿರುವುದರಿಂದ ಮಧ್ಯಾಹ್ನದ ವೇಳೆಯಲ್ಲಿ ಟ್ಯಾಂಕ್ಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಸಮಸ್ಯೆ ಉದ್ಭವಿಸುವುದಿಲ್ಲ. ಸಮರ್ಪಕವಾಗಿ ನಲ್ಲಿಗಳ ಮೂಲಕ ಮನೆಗಳಿಗೆ ಪೂರೈಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಸೌರ ವಿದ್ಯುತ್ ಇರುವುದರಿಂದ ಟ್ಯಾಂಕ್ಗೆ ನೀರು ತುಂಬಿಸಲು ಗ್ರಿಡ್ ಮೊರೆ ಹೋಗುವುದು ಬೇಡ ಎಂದರು.

ತಾಲ್ಲೂಕಿನಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಮತ್ತು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಬಗ್ಗೆ ಮಾಹಿತಿ ಪಡೆದರು.

ಗ್ರಾಮ ಠಾಣಾ ಮತ್ತು ಗ್ರಾಮ ಠಾಣಾ ಹೊರಭಾಗದಲ್ಲಿ ಸ್ವಂತ ಜಮೀನಿನಲ್ಲಿ ಈಗಾಗಲೇ ಮನೆ ನಿರ್ಮಿಸಿಕೊಂಡಿರುವ ರೈತರಿಗೆ ಖಾತೆ ಮಾಡಿಕೊಡಬೇಕು. ಅನಗತ್ಯವಾಗಿ ಗೊಂದಲ ಮೂಡಿಸಬಾರದು. ಇಲ್ಲದಿರುವ ಸಮಸ್ಯೆ ಉಂಟು ಮಾಡಬಾರದು. ಹೊಸದಾಗಿ ಮನೆ ನಿರ್ಮಿಸುವರು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಜನರಿಗೆ ಉಪಯೋಗ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆತಿಳಿಸಿದರು.

ಶಾಸಕ ಸಿ.ಎನ್. ಬಾಲಕೃಷ್ಣ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ಜೆಜೆಎಂ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ನವ್ಯಶ್ರೀ, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎನ್. ಮಂಜುನಾಥ್, ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್, ಮೂರ್ತಿ, ತಾ.ಪಂ. ಇಒ ಹರೀಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-36-86105086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.