ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ

ಮಂಗಳವಾರ, ಮಾರ್ಚ್ 19, 2019
28 °C
ಮಲಗಲು ಮಂಚ ಇಲ್ಲ, ಅಡುಗೆಗೆ ಕೊಳೆತ ತರಕಾರಿ ಬಳಕೆ: ಆರೋಪ

ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ

Published:
Updated:
Prajavani

ಹಾಸನ : ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆ ನಡೆಸುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಹಲವು ದಿನಗಳಿಂದ ವಾರ್ಡನ್‌ ಗಮನಕ್ಕೆ ತಂದರೂ ಪ್ರಯೋಜನ ಆಗುತ್ತಿಲ್ಲ. ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡರೂ ಇತ್ತ ಸುಳಿಯುತ್ತಿಲ್ಲ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

‘ರಾತ್ರಿ ಮತ್ತು ಮಧ್ಯಾಹ್ನದ ನೀಡು ಊಟ ಚನ್ನಾಗಿರುವುದಿಲ್ಲ. ಕೊಳೆತ ತರಕಾರಿ ಬಳಸಿ ಅಡುಗೆ ಮಾಡಲಾಗುತ್ತಿದೆ. ಮಂಚವಿಲ್ಲದೆ ನೆಲದ ಮೇಲೆ ಮಲಗಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಗ್ರಂಥಾಲಯದಲ್ಲಿ ಪುಸ್ತಕಗಳು ಇಲ್ಲ. ಅಗತ್ಯ ಸೌಲಭ್ಯ ಹೊರತು ಪಡಿಸಿ ವಾಹನಗಳ ನಿಲುಗಡೆಗೆ ಚಾವಣಿ ನಿರ್ಮಾಣ ಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಜಿಲ್ಲೆಯ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಇದೇ ರೀತಿಯ ಸಮಸ್ಯೆ ಇದೆ. ಗುರುವಾರ ರಾತ್ರಿಯಿಂದಲೂ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಸಮಸ್ಯೆಗಳಿಗೆ ಸ್ಪಂದಿಸಿ ಮೂಲ ಸೌಕರ್ಯ ಒದಗಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಎಲ್ಲಾ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳಾದ ಲೋಕೇಶ್, ಪೃಥ್ವಿ, ವಿನಾಯಕ, ರವೀಂದ್ರ ಚೌಹಾಣ್, ರಘುನಾಯಕ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !