ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್ಆರ್‌ಪಿ: ತಪ್ಪಿತಸ್ಥರ ವಿರುದ್ಧ ಕ್ರಮ

Last Updated 28 ನವೆಂಬರ್ 2020, 11:16 IST
ಅಕ್ಷರ ಗಾತ್ರ

ಹಾಸನ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ (ಎಚ್‌ಆರ್‌ಪಿ) ಹೆಸರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಸಿರುವ ಹಗರಣದ ತನಿಖೆ ಪ್ರಗತಿಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಕಾನೂನು ಪ್ರಕಾರ ನೋಟಿಸ್‌ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಎಷ್ಟೇ ಪ್ರಭಾವಿಯಾಗಿದ್ದರೂ ಬಿಡುವುದಿಲ್ಲ ಮತ್ತು ಇದರಲ್ಲಿ ರಾಜಕೀಯ ಒತ್ತಡ ಇಲ್ಲ. ಅಕ್ರಮ ಭೂ ಮಂಜೂರಾತಿಯನ್ನು ರದ್ದುಗೊಳಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರ್‌.ಆರ್‌.ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿತ್ತು ಎಂಬ
ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷ,ಅವರು ಯಾವಾಗ ಯಾರ ಜೊತೆ ಹೋಗ್ತಾರೆ, ಯಾವಾಗ ಬರ್ತಾರೆ ಆ ಬ್ರಹ್ಮನಿಗೂ ಗೊತ್ತಾಗಲ್ಲ ಎಂದರು.

60 ವರ್ಷ ತುಂಬಿದ, ನಾಲ್ಕು ಎಕರೆಗೂ ಕಡಿಮೆ ಜಮೀನು ಇರುವವರೆಲ್ಲರಿಗೂ ಅಧಿಕಾರಿಗಳೆ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಪಿಂಚಣಿ ಮಂಜೂರು ಮಾಡುವ ಸುಧಾರಿತ ಪಿಂಚಣಿ ಯೋಜನೆ 20 ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT