ಗುರುವಾರ , ಫೆಬ್ರವರಿ 20, 2020
17 °C

ಬಿಎಸ್‌ವೈ ಸ್ಪರ್ಧಿಸಲ್ಲ ಎಂದು ಹೇಳಿಲ್ಲ: ಸಚಿವ ಜೆ.ಸಿ. ಮಾಧುಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಕುರಿತು ಯಾವುದೇ ಸಭೆ, ಸಮಾರಂಭದಲ್ಲಿ ಹೇಳಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಭಾಕರ್ ಭಟ್ ಅವರದು ವೈಯಕ್ತಿಕ ಹೇಳಿಕೆ. ಅವರ ಜತೆ ಮಾತನಾಡಿರುವುದು ಗೊತ್ತಿಲ್ಲ. ನಮ್ಮ ಜತೆ ಈ ವಿಚಾರ ಚರ್ಚಿಸಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ 150 ಸೀಟು ಗೆಲ್ಲುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇದೆ’ ಎಂದರು.

ಉಪ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಆಳವಾದ ಮಾಹಿತಿಯಿಲ್ಲ. ಮುಖ್ಯಮಂತ್ರಿ ದಾವೊಸ್‌ ಪ್ರವಾಸದಿಂದ ಹಿಂದಿರುಗಿದ ನಂತರ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದರು.

ಅರಕಲಗೂಡು, ಹಾಸನ, ಪಿರಿಯಾಪಟ್ಟಣ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರವಲ್ಲ. ರಾಜ್ಯದ ಹಲವೆಡೆ ಟೋಲ್ ಸಂಗ್ರಹಕ್ಕೆ ಸರ್ಕಾರ ಅವಕಾಶ ನೀಡಿದೆ. ಕೃಷಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಉಚಿತ ಪ್ರವೇಶ ನೀಡುವ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ಪಡೆಯುವುದಾಗಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು