ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನಸ್ನೇಹಿ ಸಂಸದನಾಗಿ ಕಾರ್ಯ: ಶ್ರೇಯಸ್ ಪಟೇಲ್

Published : 10 ಸೆಪ್ಟೆಂಬರ್ 2024, 14:09 IST
Last Updated : 10 ಸೆಪ್ಟೆಂಬರ್ 2024, 14:09 IST
ಫಾಲೋ ಮಾಡಿ
Comments

ಹಾಸನ: ನಾನೊಬ್ಬ ಜನಸ್ನೇಹಿ ಸಂಸದನಾಗಿ ನಿಮ್ಮೆಲ್ಲ ಕಷ್ಟ ಕಾರ್ಪಣ್ಯ, ನೋವು– ನಲಿವುಗಳಲ್ಲಿ ಭಾಗಿಯಾಗುತ್ತೇನೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ಇಲ್ಲಿನ ರವೀಂದ್ರ ನಗರದಲ್ಲಿರುವ ಸವಿತಾ ಸಮಾಜದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಸವಿತಾ ಸಮಾಜ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸವಿತಾ ಸಮಾಜದಂತಹ ಸಣ್ಣಪುಟ್ಟ ಸಮುದಾಯಗಳನ್ನು ಮೇಲೆ ಎತ್ತುವುದು ಜನಪ್ರತಿನಿಧಿಗಳ ಜವಾಬ್ದಾರಿ ಆಗಿದ್ದು, ಮುಂದಿನ ದಿನಗಳಲ್ಲಿ ಸವಿತಾ ಸಮಾಜಕ್ಕೆ ಇನ್ನೂ ಹೆಚ್ಚಿನ ಬಲ ತುಂಬುವ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಅವರ ನೆರವಿನಿಂದಾಗಿ ನಾನು ಸಂಸದನಾಗಿದ್ದು, ನಾನು ಸಂಸದ ಮಾತ್ರವಲ್ಲ, ಶ್ರೇಯಸ್ ನಿಮ್ಮ ಮನೆಯ ಮಗ ಎಂದು ತಿಳಿದು, ಯಾವುದೇ ಕೆಲಸಗಳಿಗೆ ನೇರವಾಗಿ ಬಂದು ತನ್ನನ್ನು ಕಾಣುವಂತೆ ಸಾರ್ವಜನಿಕರಿಗೆ ತಿಳಿಸಿದರು.

ಸವಿತಾ ಸಮಾಜದ ಅಧ್ಯಕ್ಷ, ಹಾಸನ ಜಿಲ್ಲಾ ಸವಿತಾ ಸಮಾಜ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್, ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT