ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಪ್ರೀತಂ ಗೌಡ ನಡೆಗೆ ಜೆಡಿಎಸ್‌ ಮುಖಂಡ ಎಚ್‌.ಪಿ. ಸ್ವರೂಪ್ ಆಕ್ಷೇಪ

Last Updated 18 ಡಿಸೆಂಬರ್ 2021, 15:56 IST
ಅಕ್ಷರ ಗಾತ್ರ

ಹಾಸನ: ‘ರಾಜ್‌ಕುಮಾರ್ ನಗರದ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ವಿಚಾರದಲ್ಲಿ ಶಾಸಕ ಪ್ರೀತಂಜೆ.ಗೌಡ ನಗರಸಭೆ ಸದಸ್ಯರನ್ನು ಕಡೆಗಣಿಸಿದ್ದಾರೆ’ ಎಂದು ಜೆಡಿಎಸ್‌ ಮುಖಂಡ ಎಚ್‌.ಪಿ. ಸ್ವರೂಪ್‌ ಆರೋಪಿಸಿದರು.

‘ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಇದ್ದರೂ, ತಮ್ಮ ಪಕ್ಷದ ಕಾರ್ಯಕರ್ತರನ್ನು ಮನೆಮನೆಗೆ ಕಳುಹಿಸಿ ಹಕ್ಕು ಪತ್ರ ನೀಡಲು ದಾಖಲೆ ಸಂಗ್ರಹ ಮಾಡಿಸುತ್ತಿದ್ದಾರೆ. ಸಂಬಂಧಪಟ್ಟ ವಾರ್ಡ್‌ ಸದಸ್ಯರಿಗೆ ಯಾವುದೇ ಮಾಹಿತಿ ನೀಡದೆ ಅಗೌರವ ತೋರಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇವುಗಳ ಬಗ್ಗೆ ಸದನದಲ್ಲಿ ಸರ್ಕಾರದ ಗಮನ ಸೆಳೆಯಬೇಕು. ಆದರೆ, ಅಧಿವೇಶನಕ್ಕೆ ಗೈರಾಗುವ ಮೂಲಕ ಹಾಸನದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ. ವಿಧಾನ ಪರಿಷತ್ ಹಾಗೂ ಒಕ್ಕಲಿಗರ ಸಂಘದ ಚುನಾವಣೆ ಸೋಲಿನ ಹತಾಶೆಯಿಂದ ಕ್ಷೇತ್ರದಲ್ಲೇ ಉಳಿದಿದ್ದಾರೆ ಎಂದರು.

ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಶಾಸಕ ಎಚ್.ಡಿ.ರೇವಣ್ಣ ಅವರ ಪ್ರಯತ್ನದಿಂದ ನಗರದ ವಿವಿಧೆಡೆ ಇರುವ ಕೊಳಚೆ ಪ್ರದೇಶದ ವಾಸಿಗಳಿಗೆ ಒಂದು ಸಾವಿರ ಮನೆ ನೀಡಲು ಅನುಮೋದನೆ ಸಿಕ್ಕಿತ್ತು. ಅದನ್ನು ಈಗ ಹಂಚಿಕೆ ಮಾಡಲು ಹೊರಟಿರುವ ಶಾಸಕ, ಯಾವುದೇ ಸದಸ್ಯರ ಗಮನಕ್ಕೆ ತಾರದೆ 768 ಮಂದಿಗೆ ಮನೆ ಹಂಚಿಕೆ ಮಾಡಲು ಹೊರಟಿದ್ದಾರೆ. ಈ ಬಗ್ಗೆ ಚುನಾ
ಯಿತ ಸದಸ್ಯರೊಂದಿಗೆ ಸಭೆ ಮಾಡಿಲ್ಲ. ಇನ್ನಾದರೂ ಕೀಳು ಮಟ್ಟದ ರಾಜಕಾರಣ ಬಿಟ್ಟು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದು
ಕೊಂಡು ಕೆಲಸ ಮಾಡಲಿ ಎಂದರು.

ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್‌ ಮಾತನಾಡಿ, ‘ಶಾಸಕ ಪ್ರೀತಂ ಗೌಡ ರಾಜ್‌ಕುಮಾರ್‌ ಬಡಾವಣೆಗೆ ಭೇಟಿ ನೀಡುವ ಮಾಹಿತಿ ಇರಲಿಲ್ಲ. ದಾಖಲೆ ಕೇಳುತ್ತಿದ್ದವರನ್ನು ಪ್ರಶ್ನೆ ಮಾಡಿದ್ದಕ್ಕೆ ಶಾಸಕರು ಕಳುಹಿಸಿದ್ದಾರೆ ಎಂದು ಉತ್ತರಿಸಿದರು. ರಾಜ್‌ಕುಮಾರ್ ಬಡಾವಣೆ ನಿರ್ಮಾಣಕ್ಕೆ ಹಲವರ ಶ್ರಮ ಇದೆ. ಹಕ್ಕುಪತ್ರ ನೀಡುವುದು ಸ್ವಾಗತಾರ್ಹ. ಆದರೆ, ಇದರಲ್ಲಿ ತಾರತಮ್ಯ ಮಾಡುವುದು ಬೇಡ’ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ನಗರಸಭೆ ಸದಸ್ಯರಾದ ಎಸ್.ಎಸ್.ವಾಸು ದೇವ್, ಮಹೇಶ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT