ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ-3 | 8 ಪರೀಕ್ಷಾ ಕೇಂದ್ರ: 1,359 ವಿದ್ಯಾರ್ಥಿಗಳು

ಜೂನ್‌ 24 ರಿಂದ ಜುಲೈ 5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3
Published 19 ಜೂನ್ 2024, 13:57 IST
Last Updated 19 ಜೂನ್ 2024, 13:57 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಪರೀಕ್ಷೆ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

8 ಪರೀಕ್ಷಾ ಕೇಂದ್ರಗಳಿಂದ ಒಟ್ಟು 1,359 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳನ್ನು ಸಮಗ್ರತೆ, ಪಾವಿತ್ರ್ಯ ಮತ್ತು ಗೌಪ್ಯತೆಯಿಂದ ವ್ಯವಸ್ಥಿತವಾಗಿ ನಡೆಸಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಹೆಚ್ಚು ಪಾರದರ್ಶಕವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಣಾವಲು ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಅನುಮಾನಸ್ಪದ ವ್ಯಕ್ತಿಗಳ ಚಲನವಲನ ವೀಕ್ಷಣೆಗಾಗಿ ವೆಬ್ ಕಾಸ್ಟಿಂಗ್ ಕಣ್ಗಾವಲು ಮಾಡಲಾಗಿದೆ ಎಂದರು.

8 ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರು ಮತ್ತು ವಿಶೇಷ ಜಾಗೃತದಳ ಸದಸ್ಯರನ್ನು ನೇಮಿಸಲಾಗಿದೆ. ಜಿಲ್ಲಾ ಹಂತದಲ್ಲಿ ಜಿಲ್ಲಾ ಜಾಗೃತದಳ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ಜಿಲ್ಲಾ ಖಜಾನೆಯಿಂದ ಗೌಪ್ಯ ಲಕೋಟೆಗಳನ್ನು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯವರು ಶಸ್ತ್ರಸಜ್ಜಿತ ಪೊಲೀಸ್‌ ಸಿಬ್ಬಂದಿ ಸುರಕ್ಷತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ವಿತರಿಸಲಿದ್ದಾರೆ. ಈ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ಅತ್ಯಧಿಕ ತಾಪಮಾನ ಮತ್ತು ಇತರೆ ಕಾರಣಗಳಿಂದ ಉದ್ಭವಿಸುವ ತುರ್ತು ವೈದ್ಯಕೀಯ ನಿರ್ವಹಣೆಗಾಗಿ ಆರೋಗ್ಯ ಸಹಾಯಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ, ಇತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT