ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎತ್ತಿನಹೊಳೆ ಉದ್ಘಾಟನೆ: ಸಿಎಂ ಬಾಗಿನ ಅರ್ಪಿಸಲು ನಿರ್ಮಿಸಿದ್ದ ಮಂಟಪ ಕುಸಿತ

Published 6 ಸೆಪ್ಟೆಂಬರ್ 2024, 6:46 IST
Last Updated 6 ಸೆಪ್ಟೆಂಬರ್ 2024, 6:46 IST
ಅಕ್ಷರ ಗಾತ್ರ

ಹೆಬ್ಬನಹಳ್ಳಿ (ಸಕಲೇಶಪುರ): ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ- 1ಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಾಗಿನ ಅರ್ಪಿಸಲು ಇಲ್ಲಿ ನಿರ್ಮಿಸಲಾಗಿದ್ದ ಮಂಟಪವು ಶುಕ್ರವಾರ ಕಾರ್ಯಕ್ರಮ ಆರಂಭವಾಗುವುದಕ್ಕಿಂತ ಮೊದಲು ಕುಸಿದು ಬಿತ್ತು.

ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮಧ್ಯಾಹ್ನ 12ಕ್ಕೆ ಚಾಲನೆ ನೀಡಿದ ಬಳಿಕ ಹೆಬ್ಬನಹಳ್ಳಿಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಹೂವು, ತಳಿರು ತೋರಣಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು.

ಶುಕ್ರವಾರ 11.15ರ ಹೊತ್ತಿಗೆ ಮಂಟಪ ಕುಸಿದು ಬಿತ್ತು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯ ಉದ್ಘಾಟನೆ ಮುನ್ನ ಈ ರೀತಿ ಆಗಿರುವುದು ಅಧಿಕಾರಿಗಳಿಗೆ, ಜನಪ್ರತಿನಿದಿಗಳಿಗೆ ಬೇಸರ ಉಂಟು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT