ಹಾಸನ: ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಈ ಬಾರಿ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ, ಬೇಲೂರು ತಾಲ್ಲೂಕಿನ ಅಂಗಡಿಹಳ್ಳಿಯ ಸಂಗೀತಾ ಅವರು ಧ್ವಜಾರೋಹಣ ನೆರವೇರಿಸಿ, ಗೌರವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಧ್ವಜ ವಂದನೆ ನೆರವೇರಿಸಿ, ಸಿಬ್ಬಂದಿಯಿಂದ ಗೌರವ ಸ್ವೀಕರಿಸಿದರು.
ಜಿಲ್ಲಾ ಪಂಚಾಯಿತಿ: ಭಾರತವು ಸ್ವತಂತ್ರಗೊಂಡು ಇಂದಿಗೆ 76 ವರ್ಷವಾಗಿದೆ. ನಮ್ಮ ದೇಶವು ಇನ್ನೂ ಅಭಿವೃದ್ದಿ ಹೊಂದುತ್ತಿರುವ ದೇಶವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ದೇಶವು ಅಭಿವೃದ್ದಿ ಹೊಂದಿರುವ ರಾಷ್ಟ್ರವಾಗಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಹೇಳಿದರು.
ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಉಪ ಕಾರ್ಯದರ್ಶಿ (ಆಡಳಿತ) ಚಂದ್ರಶೇಖರ್, ಉಪ ಕಾರ್ಯದರ್ಶಿ (ಅಭಿವೃದ್ದಿ) ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಜೀವನಜ್ಯೋತಿ: ನಗರದ ಜೀವನಜ್ಯೋತಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅನನ್ಯ ಟ್ರಸ್ಟ್ ಅಧ್ಯಕ್ಷೆ ಕೆ.ಟಿ.ಜಯಶ್ರೀ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಿತು. ನಿವೃತ್ತ ಎಲ್‌ಐಸಿ ಅಧಿಕಾರಿ ಜಯಪ್ರಕಾಶ್ ಮಾತನಾಡಿದರು .ಶಾಲಾ ಮುಖ್ಯಶಿಕ್ಷಕ ವಿನೋದ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ರೀಡೆಗಳಲ್ಲಿ ವಿಜೇತ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು. ಟ್ರಸ್ಟ್ ಸದಸ್ಯರಾದ ನಿರ್ಮಲಾ ಎಲ್.ಎಸ್., ಸುಮನಾ, ರಚನಾ, ವೈದ್ಯರಾದ ಅನುಷಾ, ವೈಷ್ಣವಿ ಮತ್ತು ಶಿಕ್ಷಕಿಯರಾದ ಬಾನು, ರೂಪ, ಅನುರಾಧ ಉಪಸ್ಥಿತರಿದ್ದರು.
ಜೆಡಿಎಸ್: ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ವಕ್ತಾರ ಹೊಂಗೆರೆ ರಘು, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ನಗರಸಭೆ ಮಾಜಿ ಸದಸ್ಯರಾದ ಗೋಪಾಲ್, ಸಮೀರ್ ಖಾನ್, ಮುಖಂಡರಾದ ಬನವಾಸೆ ರುದ್ರಪ್ಪ, ದೊಡ್ಡಗದ್ದವಳ್ಳಿ ಕುಮಾರ್, ಲಿಂಗರಾಜೇಗೌಡ, ಗಿರೀಶ್, ರವಿ ಇದ್ದರು.
ರೆಡ್ ಕ್ರಾಸ್: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ವತಿಯಿಂದ ರೆಡ್ ಕ್ರಾಸ್ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಮಂಜುನಾಥ್ ದತ್ತ ಮತ್ತು ಡಾ.ಹೇಮಲತಾ ಪಟ್ಟಾಭಿ ಧ್ವಜಾರೋಹಣ ನೆರವೇರಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಹೆಮ್ಮಿಗೆ ಮೋಹನ್ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ನಿರ್ದೇಶಕರಾದ ಎಸ್.ಎಸ್. ಪಾಷ ಸ್ವಾಗತಿಸಿದರು. ಕಾರ್ಯದರ್ಶಿ ಶಬ್ಬೀರ್ ಅಹಮದ್ ವಂದಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಎಚ್.ಡಿ. ಜಯೇಂದ್ರಕುಮಾರ್, ನಿರ್ದೇಶಕರಾದ ನಿರ್ಮಲಾ, ಮಂಜಪ್ಪಗೌಡ, ಮಹಾವೀರ್ ಬನ್ಸಾಲಿ, ಬಿ.ಆರ್. ಉದಯ ಕುಮಾರ, ಗಿರೀಶ್, ಜಯಪ್ರಕಾಶ್, ಸಂಚಾಲಕ ಹರ್ಷಿತ್ ಎಚ್.ಆರ್., ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದ ಪ್ರತಿನಿಧಿಗಳಾದ ರುಮಾನ, ದೀಪು, ತಸ್ಲಿಮಾ ಹಾಗೂ ವಿದ್ಯಾರ್ಥಿ ನಿಲಯದ 50 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೃಷಿ ವಿಜ್ಞಾನ ಕೇಂದ್ರ: ಕೇಂದ್ರದ ಹಿರಿಯ ವಿಜ್ಞಾನಿ, ಮುಖ್ಯಸ್ಥ ಡಾ. ರಾಜೇಗೌಡ ಧ್ವಜಾರೋಹಣ ನೆರವೇರಿಸಿದರು. ಕೇಂದ್ರದ ವಿಜ್ಞಾನಿ ಡಾ. ಶಿವಶಂಕರ್ ಎಂ. ಮಾತಾನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ಮಹಿಳಾ ಕಾಲೇಜು: ಭಾರತ ದೇಶವನ್ನು ಈ ಹಿಂದೆ ಹಿಯಾಳಿಸಿದ ಅನೇಕ ರಾಷ್ಟ್ರಗಳು ಇಂದು ನಮ್ಮ ದೇಶದ ಅಭಿವೃದ್ಧಿಯನ್ನು ಕಂಡು ಬೆರಗಾಗಿವೆ. ಅತೀ ದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರಗಳ ಪೈಕಿ ಭಾರತ ಐದನೇ ಸ್ಥಾನದಲ್ಲಿ ಇದೆ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಗುರುರಾಜು ಹೇಳಿದರು.
ನಗರದ ಎಂ.ಜಿ. ರಸ್ತೆಯ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಪುರುಷೋತ್ತಮ್ ಮಾತನಾಡಿದರು. ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.