ಚನ್ನರಾಯಪಟ್ಟಣ: ‘ವಿದ್ಯಾರ್ಥಿಗಳಿಗೆ ವಿದ್ಯೆ ಜೊತೆಗೆ ವಿನಯ ಮತ್ತು ವಿವೇಕ ಅಗತ್ಯ’ ಎಂದು ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥ ಸ್ವಾಮೀಜಿ ಹೇಳಿದರು.

ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಭಾನುವಾರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ‘ವಿದ್ಯಾರ್ಥಿಗಳು ಯೋಜನಾ ಬದ್ಧವಾಗಿ ಓದಬೇಕು. ಶಿಸ್ತು ಮತ್ತು ಸಮಯಪಾಲನೆ ಕಾಪಾಡಬೇಕು. ಮಾನವೀಯ ಮೌಲ್ಯ ಮೈಗೂಡಿಸಿಕೊಂಡು ಮುನ್ನಡೆದರೆ ಭವಿಷ್ಯ ಉಜ್ವಲವಾಗಿರುತ್ತದೆ. ಯಾವುದೇ ಹುದ್ದೆ ಅಲಂಕರಿಸಿದರೂ ಸಂಸ್ಕಾರ, ಸನ್ನಡತೆ ಮುಖ್ಯ’ ಎಂದರು.

ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ‘ಅರೆ ವೈದ್ಯಕೀಯ ಕೋರ್ಸ್, ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಕೋರ್ಸ್ಗಳನ್ನು ವ್ಯಾಸಂಗ ಮಾಡುವುದರಿಂದ ವಿಪುಲ ಉದ್ಯೋಗಾವಕಾಶ ಲಭ್ಯ ಇವೆ. ಅದೇ ರೀತಿ ಸಾಮಾನ್ಯ ಜ್ಞಾನ ತಿಳಿದುಕೊಂಡಾಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬಹುದು’ ಎಂದು ತಿಳಿಸಿದರು.

‘ಪಟ್ಟಣದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದಿಂದ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಲಾಗುವುದು’ ಎಂದು ಹೇಳಿದರು.

ಕತ್ತರಿಘಟ್ಟದ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಚಂದ್ರಶೇಖರ ಗುರೂಜಿ ಆಶೀರ್ವಚನ ನೀಡಿ, ಸಾಧನೆಯ ಹಿಂದೆ ಸಾಕಷ್ಟು ಪರಿಶ್ರಮ ಇರುತ್ತದೆ. ಸಮಾಜಮುಖಿ ಚಿಂತನೆ ಮತ್ತು ಸಮಾಜಸೇವೆ ಮಾಡುವ ತುಡಿತ ಎಲ್ಲರಲ್ಲಿರಬೇಕು ಎಂದು ತಿಳಿಸಿದರು.

ಪುರಸಭಾ ಅಧ್ಯಕ್ಷ ಸಿ.ಎನ್. ಮೋಹನ್, ಸದಸ್ಯ ಎಚ್.ಎನ್. ನವೀನ್, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್. ವೆಂಕಟೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಆರ್. ಅನಿಲ್ ಕುಮಾರ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಚ್.ಎಂ. ನಾಗಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್, ರಾಜ್ಯಸಹಕಾರ ಮಾರಾಟ ಮಂಡಳದ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಪರಿಸರವಾದಿ ಸಿ.ಎನ್. ಅಶೋಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ವಿ. ಜಯಪಾಲ್, ಕುವೆಂಪು ಸಂಘದ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.