ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಶತಕ ದಾಟಿದ ಸೋಂಕಿತ ಸಂಖ್ಯೆ

Last Updated 4 ಏಪ್ರಿಲ್ 2021, 14:20 IST
ಅಕ್ಷರ ಗಾತ್ರ

ಹಾಸನ: ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ 104 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29802 ದಾಟಿದೆ. ಕಾಯಿಲೆಗೆ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 476 ತಲುಪಿದೆ. 608 ಸಕ್ರಿಯ ಪ್ರಕರಣಗಳ ಪೈಕಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 43 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಮೂಲಕ ಗುಣಮುಖರ ಸಂಖ್ಯೆ 28,718 ದಾಟಿದೆ.

ಹೊಸದಾಗಿ ಅರಸೀಕೆರೆ 24, ಬೇಲೂರು 1, ಚನ್ನರಾಯಣಪಟ್ಟಣ 23, ಹಾಸನ 41, ಹೊಳೆನರಸೀಪುರ 9, ಸಕಲೇಶಪುರ , ಆಲೂರು , ಅರಕಲಗೂಡಿನಲ್ಲಿ ತಲಾ ಇಬ್ಬರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವುದರಿಂದ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆಯನ್ನು ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯದಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಸಾರ್ವಜನಿಕರು ಗುರುತಿನ ಚೀಟಿ ತೋರಿಸಿ, ಲಸಿಕೆ ಸದುಪಯೋಗ ಪಡೆದುಕೊಳ್ಳಬೇಕು. ಇದರಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಭಾನುವಾರ 2965 ಜನರು ಸೇರಿದಂತೆ ಈವರೆಗೆ 106820 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT