ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: 19 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಮತ್ತೆ 7 ಸಾವು, 387 ಜನ ಗುಣಮುಖರಾಗಿ ಬಿಡುಗಡೆ
Last Updated 7 ಅಕ್ಟೋಬರ್ 2020, 15:05 IST
ಅಕ್ಷರ ಗಾತ್ರ

ಹಾಸನ: ಕೋವಿಡ್‌ ಪೀಡಿತ ಏಳು ಜನರು ಮೃತಪಟ್ಟಿದ್ದು, ಇದರೊಂದಿಗೆ ಸಾವಿಗೀಡಾದವರ ಸಂಖ್ಯೆ 364ಕ್ಕೆ ಏರಿಕೆಯಾಗಿದೆ. ಹೊಸದಾಗಿ 457 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 19,441 ತಲುಪಿದೆ.

ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ ಮೂವರು, ಬೇಲೂರಿನ ಇಬ್ಬರು, ಹಾಸನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.

3,946 ಸೋಂಕಿತರು ಕೋವಿಡ್‌ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಬಿಡುಗಡೆಯಾದ 387 ಜನ ಸೇರಿ ಈವರೆಗೆ 15,131 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 38, ಚನ್ನರಾಯಪಟ್ಟಣ 93, ಆಲೂರು 13, ಹಾಸನ 216, ಹೊಳೆನರಸೀಪುರ 18, ಅರಕಲಗೂಡು 31, ಬೇಲೂರು 18, ಸಕಲೇಶಪುರ 28 ಹಾಗೂ ಇತರ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT