ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳಿಗೆ ಮೂಲಭೂತ ಸೌಕರ್ಯ: ಡಿ.ಸಿ ಸೂಚನೆ

Last Updated 23 ಸೆಪ್ಟೆಂಬರ್ 2021, 14:56 IST
ಅಕ್ಷರ ಗಾತ್ರ

ಹಾಸನ: ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ
ಮಾಡುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ಗುರುವಾರ ಸಭೆ ನಡೆಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದರು.

ಕಾಂಕ್ರೀಟ್ ಚರಂಡಿ, ಕುಡಿಯುವ ನೀರಿನ ಪೈಪ್ ಲೈನ್, ವಿದ್ಯುತ್ ಕಂಬ, ಉತ್ತಮ ದೀಪ ಅಳವಡಿಕೆ, ಜೆಲ್ಲಿ ರಸ್ತೆ, ಕಟ್ಟಡ ದುರಸ್ತಿ, ಸೋಲಾರ್ ದೀಪ ಅಳವಡಿಕೆ, ಬಾವಿ ಉನ್ನತೀಕರಣ ಮತ್ತುಮೇಲ್ಚಾವಣಿ ನಿರ್ಮಾಣ ಮುಂತಾದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಬಾಕಿ ಉಳಿದಿರುವಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸುವಂತೆ ಹೇಳಿದರು.

ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಪ್ರತಿ ಗ್ರಾಮಗಳ ಅಭಿವೃದ್ದಿಗೆ
ಸಮಾನವಾಗಿ ಅನುದಾನ ಬಳಕೆ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT