ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಆದೇಶ ಹಿಂಪಡೆಯಲು ಒತ್ತಾಯ

Last Updated 10 ಸೆಪ್ಟೆಂಬರ್ 2020, 15:45 IST
ಅಕ್ಷರ ಗಾತ್ರ

ಹಾಸನ: ಅಂಗವಿಕಲರ ಯೋಜನೆಗಳ ನೋಡಲ್ ಅಧಿಕಾರಿಯನ್ನಾಗಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ನೇಮಿಸಿ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಅಂಗವಿಕಲರ ಹಾಗೂ ವಿವಿಧೋದ್ದೇಶ ಗ್ರಾಮೀಣ ಪುನರ್ವಸತಿ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಮೌನ ಪ್ರತಿಭಟನೆ ನಡೆಸಲಾಯಿತು.

ರಾಜ್ಯದ 6022 ಗ್ರಾಮ ಪಂಚಾಯಿತಿಗಳಲ್ಲಿ 4906 ಅಂಗವಿಕಲರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಹಾಗೂ 169 ಜನರು ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಈ ಎಲ್ಲಾ ಹುದ್ದೆಗಳ ಮೇಲುಸ್ತುವಾರಿಯನ್ನು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ವಹಿಸುತ್ತಿರುವುದು ಖಂಡನೀಯ. ಇದರಿಂದ ಹಂತ ಹಂತವಾಗಿ ಅಂಗವಿಕಲರ ಮೇಲೆ ಸವಾರಿ ನಡೆಸಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಗ್ರಾಮ ಮಟ್ಟದಲ್ಲಿ ಕೆಲಸವನ್ನು ಅಚ್ಚುಕಟ್ಟಾಗಿ
ನಿಭಾಯಿಸಲಾಗುತ್ತಿದೆ. ಆದ್ದರಿಂದಲೇ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಗೆ ಎರಡು ಬಾರಿ
ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಸ್ವಾವಲಂಬಿ ಬದುಕು ಕಟ್ಟಿಕೊಂಡು ಸಮಾಜಕ್ಕೆ ಮಾದರಿಯಾಗಿರುವ ನೌಕರರಿಗೆ
ಸರ್ಕಾರ ತೊಂದರೆ ನೀಡುವುದು ಸರಿಯಲ್ಲ ಎಂದರು.

ಈ ಸಂಬಂಧ ಜಿಲ್ಲಾಧಿಕಾರಿ ಆರ್. ಗಿರೀಶ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ಕೆ. ಸುಬ್ರಮಣ್ಯಂ, ಎಸ್. ಕೃಷ್ಣಪ್ಪ, ಜಿ. ದೇವರಾಜು, ಬಿ.ವಿ. ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT