ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್.ಡಿ.ಕೋಟೆ: ಹ್ಯಾಂಡ್ ಪೋಸ್ಟ್ ವೃತದಲ್ಲಿ ಕ್ಯಾಮೆರಾ ಅಳವಡಿಕೆ

ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಮೇಲೆ ನಿಗಾ
Published 30 ಜೂನ್ 2024, 15:15 IST
Last Updated 30 ಜೂನ್ 2024, 15:15 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ಪಟ್ಟಣ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ವೃತದಲ್ಲಿ ಸ್ವಯಂ ಚಾಲಿತ ಸಂಚಾರ ದಂಡ ವಿಧಿಸಲು ಅತ್ಯಾಧುನಿಕ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆಯಿಂದ ಅಳವಡಿಸಲಾಗಿದೆ’ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಶಬ್ಬೀರ್ ಹುಸೇನ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಜುಲೈ 1 ರಿಂದ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುವುದು, ಹೆಲೈಟ್ ಧರಿಸಿದೆ ಬೈಕ್‌ ಓಡಿಸುವುದು ಸೇರಿದಂತೆ ಎಲ್ಲ ರೀತಿಯ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಬೀಳಲಿದೆ’ ಎಂದು ಎಚ್ಚರಿಸಿದರು.

‘ಮುಂದಿನ ದಿನಗಳಲ್ಲಿ ಸರಗೂರು, ಅಂತರಸಂತೆ, ಮಾದಾಪುರ, ಹಂಪಾಪುರ ಸೇರಿದಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿಯೂ ಕ್ಯಾಮೆರಾ ಅಳವಡಿಸಲು ಇಲಾಖೆ ಮುಂದಾಗಿದೆ’ ಎಂದರು.

‘ಈ ಕ್ಯಾಮೆರಾಗಳು ಒಂದು ಕಿ.ಮೀ ದೂರದಲ್ಲಿ ಬರುವ ವಾಹನಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿದ್ದು, ಬೈಕ್‌ ಸವಾರರು ಹೆಲೈಟ್ ಹಾಕದೆ ಇರುವುದು, ಒಂದು ಬೈಕ್‌ನಲ್ಲಿ ಮೂರು ಜನ ಸಂಚರಿಸುವುದು, ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಹಾಕದೆ ಇರುವುದಕ್ಕೆ ಸ್ವಯಂ ಚಾಲಿತ ದಂಡ ವಿಧಿಸಲಾಗುತ್ತದೆ’ ಎಂದು ತಿಳಿಸಿದರು.

‘ಸಂಚಾರ ನಿಯಮ ಉಲ್ಲಂಘಿಸಿದರೆ ಫೋಟೊ ಸೆರೆ ಹಿಡಿದು ವಾಹನಗಳ ಮಾಲೀಕರಿಗೆ ನೇರವಾಗಿ ಮನೆ ವಿಳಾಸಕ್ಕೆ ದಂಡದ ರಸೀದಿಯನ್ನು ಪೋಸ್ಟ್ ಮೂಲಕ ಅಥವಾ ಮೊಬೈಲ್ ನಂಬರ್‌ಗೆ ಸಂದೇಶ ಕಳುಹಿಸಿ ದಂಡ ವಸೂಲಿ ಮಾಡಲಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT